ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಸ್ತ್ರಚಿಕಿತ್ಸೆ ಬಳಿಕ ಕೋಮಾಗೆ ಜಾರಿದ ದಕ್ಷ ಮಹಿಳಾ ಅಧಿಕಾರಿ ಸಾವು - ವೈದ್ಯರ ನಿರ್ಲಕ್ಷ್ಯ ಆರೋಪ

ಜೈಪುರ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ರಾಜಸ್ಥಾನದ ರಾಜ್ಯ ಆಡಳಿತ ಸೇವೆಯ ದಕ್ಷ ಮಹಿಳಾ ಅಧಿಕಾರಿಯೊಬ್ಬರು ಶಸ್ತ್ರಚಿಕಿತ್ಸೆಯ ಅಡ್ಡಪರಿಣಾಮಗಳಿಂದ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಜೋಧ್‍ಪುರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ (33) ಮೃತ ದುರ್ದೈವಿ. ರಾಜಸ್ಥಾನ ಆಡಳಿತ ಸೇವೆಯ 2016ನೇ ಬ್ಯಾಚ್‌ನ ಅಧಿಕಾರಿಯಾಗಿದ್ದರು. ಕಳೆದ ಸೆಪ್ಟೆಂಬರ್ 6ರಂದು ಹೊಟ್ಟೆ ನೋವು ಎಂದು ಪ್ರಿಯಾಂಕಾ ಅವರು ಜೋಧಪುರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಶಸ್ತ್ರಚಿಕಿತ್ಸೆ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಬುಧವಾರ ಅವರನ್ನು ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ಲೋಪದಿಂದಲೇ ಪ್ರಿಯಾಂಕಾ ಅವರು ಮೃತರಾಗಿದ್ದಾರೆ ಎಂದು ಗುರುವಾರ ಬಿಷ್ಣೋಯ್ ಸಮುದಾಯದವರು ಹಾಗೂ ಕುಟುಂಬದವರು ಏಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದರು.

ನಿಯಮಾವಳಿ ಪ್ರಕಾರ ಪ್ರಾಥಮಿಕ ತನಿಖೆ ಕೈಗೊಂಡು ಲೋಪ ಆಗಿದ್ದು ಕಂಡು ಬಂದರೆ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ರಾಜಸ್ಥಾನ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ನೀಡಿದ್ದರಿಂದ ಪ್ರತಿಭಟನೆ ಕೈ ಬಿಡಲಾಗಿದೆ. ಗುರುವಾರ ಸಂಜೆಯೇ ಬಿಕಾನೇರ್‌ನಲ್ಲಿ ಪ್ರಿಯಾಂಕಾ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Edited By : Vijay Kumar
PublicNext

PublicNext

20/09/2024 03:27 pm

Cinque Terre

9.5 K

Cinque Terre

0

ಸಂಬಂಧಿತ ಸುದ್ದಿ