ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸೆಪ್ಟೆಂಬರ್‌ 30ರಂದು ದೌರ್ಜನ್ಯ ನಿಯಂತ್ರಣ ಕಾಯ್ದೆ ಅರಿವು ಕಾರ್ಯಾಗಾರ

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಅನುಷ್ಠಾನ ಅಧಿಕಾರಿಗಳಿಗೆ ಅರಿವು ಮೂಡಿಸಲು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ (ಸೆಪ್ಟೆಂಬರ್‌ 30)ರಂದು ಬೆಳಿಗ್ಗೆ 10 ಗಂಟೆಯಿಂದ ಕಾರ್ಯಾಗಾರ ಏರ್ಪಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಎಸ್.ಸಿ‌.ಎಸ್.ಪಿ. ಹಾಗೂ ಟಿ.ಎಸ್.ಪಿ. ಸಲಹೆಗಾರರಾದ ನಿವೃತ್ತ ಐ.ಎ.ಎಸ್. ಅಧಿಕಾರಿ ಇ.ವೆಂಕಟಯ್ಯ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಪಂ ಸಿಇಓ ರಾಹುಲ್ ಶಿಂಧೆ, ಎಸ್.ಪಿ‌ ಡಾ.ಭೀಮಾಶಂಕರ ಗುಳೇದ ಮತ್ತಿತರರು ಕಾರ್ಯಾಗಾರದಲ್ಲಿ ಉಪಸ್ಥಿತರಿರುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ರಾಮನಗೌಡ ಕನ್ನೊಳ್ಳಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

28/09/2024 07:09 pm

Cinque Terre

24.64 K

Cinque Terre

0

ಸಂಬಂಧಿತ ಸುದ್ದಿ