ರಾಯಬಾಗ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮ್ಯಾಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಯೋಗ ಕ್ಷೇಮವನ್ನು ವಿಚಾರಿಸಿದರು.
ಬಳಿಕ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನಾನುಕೂಲಗಳ ಬಗ್ಗೆ ವಿಚಾರಿಸಿ ವಿದ್ಯಾರ್ಥಿಗಳೊಂದಿಗೆ ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಿದರು.
ನಂತರ ಸರಿಯಾಗಿ ವಿದ್ಯಾಭ್ಯಾಸ ಮಾಡಿ ಪಾಲಕರು ಹೆಮ್ಮೆ ಪಡುವಂತೆ ಮಾಡಬೇಕೆಂದು ಸಲಹೆ ನೀಡಿದ್ರು.
ಇನ್ನೂ ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಮಾಡಿಕೊಟ್ಟಿದೆ. ಹೀಗಾಗಿ ಚೆನ್ನಾಗಿ ಅಭ್ಯಾಸ ಮಾಡಿ ನೌಕರಿ ಗಿಟ್ಟಿಸಿಕೊಳ್ಳಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.
Kshetra Samachara
01/10/2024 12:28 pm