ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿದೆ.
57ನೇ ಸಿಸಿಎಚ್ ಕೋರ್ಟ್‌ನಲ್ಲಿ ಇಂದು ನಟ ದರ್ಶನ್ ಹಾಗೂ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳಿಗೆ ಜೈಲೇ ಗತಿಯಾಗಿದೆ.
PublicNext
05/10/2024 05:23 pm