ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಛತ್ತೀಸಗಢದಲ್ಲಿ 'ಸೈನಿಕರು- ಮಾವೋವಾದಿ'ಗಳ ನಡುವೆ ಎನ್ಕೌಂಟರ್ : 30 ನಕ್ಸಲರ ಹತ್ಯೆ

ದಂತೇವಾಡ: ಭದ್ರತಾ ಸಿಬ್ಬಂದಿಯೊಂದಿಗೆ ಎನ್‌ಕೌಂಟರ್ ನಡೆದಿದ್ದ ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ಶನಿವಾರ ಬೆಳಗ್ಗೆ ಮತ್ತೆ ಮೂವರು ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ನಿನ್ನೆ ಶುಕ್ರವಾರದಿಂದ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದಾಂತೇವಾಡ ಮತ್ತು ನಾರಾಯಣಪುರದ ಜಿಲ್ಲಾ ರಿಸರ್ವ್ ಗಾರ್ಡ್‌ಗಳು (DRG) ಅಬುಜ್ಮದ್‌ನಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ವಿವಿಧ ಪೊಲೀಸ್ ಶಿಬಿರಗಳಿಂದ ಕಾರ್ಯಾಚರಣೆಗೆ ಹೊರಟರು. ನಕ್ಸಲೀಯರ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಪ್ರಾಥಮಿಕವಾಗಿ ಅವರು PLGA (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಕಂಪನಿ ನಂ. 6, ಪ್ಲಟೂನ್ 16, ಮಾವೋವಾದಿಗಳು ಮತ್ತು ಮಾವೋವಾದಿಗಳ ಪೂರ್ವ ಬಸ್ತಾರ್ ವಿಭಾಗಕ್ಕೆ ಸೇರಿದವರು ಎಂದು ಗೊತ್ತಾಗಿದೆ.

Edited By : Vijay Kumar
PublicNext

PublicNext

05/10/2024 10:04 pm

Cinque Terre

167.38 K

Cinque Terre

1