ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ-ಕುಂದಾಪುದಿಂದ ತಿರುಪತಿಗೆ ನೇರ ರೈಲು ಸೇವೆಗೆ ಇಲಾಖೆ ಒಪ್ಪಿಗೆ

ಕುಂದಾಪುರ: ಉಡುಪಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಉಡುಪಿ - ಕುಂದಾಪುರದಿಂದ ತಿರುಪತಿಗೆ ನೇರ ರೈಲು ಸಂಪರ್ಕ ನೀಡಲು ರೈಲ್ವೇ ಇಲಾಖೆ ಒಪ್ಪಿಗೆ ನೀಡಿದೆ. ಉಡುಪಿ ಸಂಸದರ ನಿರಂತರ ಪ್ರಯತ್ನಕ್ಕೆ ಫಲ ಸಿಕ್ಕಿದೆ.

ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣದ ಮೂಲಕ ಮಂಗಳೂರಿಗೆ ಬರುತಿದ್ದ ಕಾಚಿಗುಡ-ಮಂಗಳೂರು ವಾರಕ್ಕೆರಡು ದಿನದ ರೈಲನ್ನು ಉಡುಪಿ ಕುಂದಾಪುರದ ಮೂಲಕ ಮುರುಡೇಶ್ವರಕ್ಕೆ ವಿಸ್ತರಣೆ ಮಾಡುವ ಸಂಸದರ ಕೋರಿಕೆಯನ್ನು ಮನ್ನಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

ಬುಧವಾರ ಮತ್ತು ಶನಿವಾರ ಸಂಜೆ 5 ಗಂಟೆಗೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಗ್ಗೆ 11 ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ. ಮುರುಡೇಶ್ವರದ ಮೂಲಕ ಕುಂದಾಪುರ, ಉಡುಪಿ, ಸುರತ್ಕಲ್‌, ಮೂಲ್ಕಿ ನಗರಗಳು, ಕೊಯಂಬತ್ತೂರು, ತಿರುಪತಿ, ಮಂತ್ರಾಲಯ ಸಮೀಪದ ದೊನೆ ಜಂಕ್ಷನ್‌ ಸೇರಿದಂತೆ ಹೈದರಾಬಾದ್‌ವರೆಗೆ ರೈಲು ಸಂಪರ್ಕ ದೊರಕಿದಂತಾಗಿದೆ.

Edited By : Nagaraj Tulugeri
PublicNext

PublicNext

09/10/2024 10:23 pm

Cinque Terre

21.15 K

Cinque Terre

0

ಸಂಬಂಧಿತ ಸುದ್ದಿ