ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕ ನಾಗೇಂದ್ರ ವಾಲ್ಮೀಕಿ ನಿಗಮದ ಮಾಸ್ಟರ್ ಮೈಂಡ್ - ಕೋರ್ಟ್‌ಗೆ ED ಸಲ್ಲಿಸಿದ ವರದಿಯಲ್ಲಿ ಉಲ್ಲೇಖ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ವರದಿಯನ್ನ ED ಸಲ್ಲಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಇಡಿ ,ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರ ಹಗರಣದ ಪ್ರಮುಖ ಆರೋಪಿ ಮತ್ತು ಮಾಸ್ಟರ್‌ಮೈಂಡ್ ಎಂದು ಉಲ್ಲೇಖಿಸಲಾಗಿದೆ.

ಸತ್ಯನಾರಾಯಣ ವರ್ಮಾ ಸೇರಿ 24 ಜನ ಇತರರ ಸಹಾಯದಿಂದ ಹಗರಣಕ್ಕೆ ಪ್ಲಾನ್ ರೂಪಿಸಲಾಗಿದೆ. ಸತ್ಯನಾರಾಯಣ, ಜೆ.ಜಿ. ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕೆಂಟಿ ನಾಗರಾಜ್, ವಿಜಯ್ ಕುಮಾರ್ ಗೌಡ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಸುಮಾರು 89.62 ಕೋಟಿಯನ್ನು ನಿಗಮದ ಖಾತೆಗಳ ಖಾತೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ನಕಲಿ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂಬ ಅಂಶವನ್ನು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಹಗರಣ ಬೆಳಕಿಗೆ ಬಂದಿದೆ,ಬಿ.ನಾಗೇಂದ್ರ ಅವರ ಪ್ರಭಾವದಿಂದ ಸೂಕ್ತ ಅನುಮತಿಯಿಲ್ಲದೆ ಎಂಜಿ ರಸ್ತೆ ಶಾಖೆಗೆ ಹಣ ವರ್ಗಾಯಿಸಿರುವುದು ಇಡಿ ತನಿಖೆಯಿಂದ ತಿಳಿದುಬಂದಿದೆ,ಮಾತ್ರವಲ್ಲದೇ ಗಂಗಾ ಕಲ್ಯಾಣ ಯೋಜನೆಯ ಹಣವನ್ನ ರಾಜ್ಯ ಖಜಾನೆಯಿಂದ 43.33 ಕೋಟಿ ವರ್ಗಾಯಿಸಲಾಗಿದೆ.ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ, ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಠೇವಣಿ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಅಲ್ಲದೆ ಇಡಿ ತನಿಖೆಯಲ್ಲಿ 20.19 ಕೋಟಿ ಹಣವನ್ನು ಬಳ್ಳಾರಿ ಕ್ಷೇತ್ರದ ಚುನಾವಣೆಗೆ ಬಳಸಲಾಗಿದೆ, 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯನ್ನು ಬೆಂಬಲಿಸಲು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂಬ ಅಂಶ ಸಹ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಗೇಂದ್ರ ಅವರ ಸೂಚನೆ ಮೇರೆಗೆ ಹಣ ನೀಡಿದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ ಇನ್ನೂ ಈ ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ, ಮೊಬೈಲ್ ಫೋನ್ ಗಳನ್ನು ನಾಶಪಡಿಸಿದ್ದಾರೆ, ಈ ಮೂಲಕ ತನಿಖೆಗೆ ಅಡ್ಡಿಪಡಿಸಿದ ಆರೋಪ ಕೂಡ ಇದೆ ಎಂಬ ಅಂಶವೂ ಸಹ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Edited By : Vijay Kumar
PublicNext

PublicNext

10/10/2024 10:10 am

Cinque Terre

84.86 K

Cinque Terre

0

ಸಂಬಂಧಿತ ಸುದ್ದಿ