ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ನಗರ DCಯಾಗಿ ಜಿ. ಜಗದೀಶ್‌ ನೇಮಕ

ಬೆಂಗಳೂರು : ಕಳೆದ ಶನಿವಾರ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೇರಿ ಹಲವು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿತ್ತು. ಉನ್ನತ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಜಿ. ಜಗದೀಶ್‌ ಅವರನ್ನು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರನ್ನು ನೋಂದಣಿ ಮಹಾಪರಿವೀಕ್ಷಕ ಮತ್ತು ಮುದ್ರಾಂಕಗಳ ಆಯುಕ್ತರಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಶನಿವಾರ ಆದೇಶ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತ ಕೆ. ಶ್ರೀನಿವಾಸ್‌ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ದಯಾನಂದ ಅವರು ನೋಂದಣಿ ಮಹಾಪರಿವೀಕ್ಷಕ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ಹೊಂದಿದ್ದರು.

ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು

* ಶ್ರೀನಿವಾಸ ಕೆ. ಐಎಎಸ್ (ಕೆಎನ್: 2012). ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಬೆಂಗಳೂರು. ಈಗಿರುವ ಹುದ್ದೆಯ ಜೊತೆಗೆ ಆಯುಕ್ತರು, ಹಿಂದುಳಿದ ವರ್ಗಗಳು, ಬೆಂಗಳೂರು ಹುದ್ದೆಗೆ ತತ್ ಕ್ಷಣದಿಂದ ಜಾರಿಗೆ ಬರುವಂತೆ ನೇಮಕ. ಈ ಹುದ್ದೆಯಲ್ಲಿದ್ದ ದಯಾನಂದ ಕೆ. ಎ. ಐಎಎಸ್ ವರ್ಗಾವಣೆ.

* ದಯಾನಂದ ಕೆ. ಎ. ಐಎಎಸ್ (ಕೆಎನ್: 2012). ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಎಂಡ್ ಕಮೀಷನರ್ ಆಫ್ ಸ್ಟಾಂಪ್ಸ್, ಬೆಂಗಳೂರು ಹುದ್ದೆಗೆ ನೇಮಕ.

* ಜಗದೀಶ್ ಜಿ. ಐಎಎಸ್ (ಕೆಎನ್: 2012), ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಆಗಿ ನೇಮಕ. ಈ ಹುದ್ದೆಯಲ್ಲಿದ್ದ ದಯಾನಂದ ಕೆ. ಎ. ವರ್ಗಾವಣೆ.

ಬಿ. ಎಂ. ಪ್ರಸಾದ್, ಕಮಾಂಡೆಂಟ್, 7ನೇ ಪಡೆ, ಕೆ.ಎಸ್.ಆರ್.ಪಿ, ಮಂಗಳೂರು ಇವರನ್ನು ಕಮಾಂಡೆಂಟ್, ಐ.ಆರ್.ಬಿ, ಮುನಿರಾಬಾದ್, ಕೊಪ್ಪಳ ಜಿಲ್ಲೆ ಈ ಖಾಲಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ.

ಬಿ. ಬಿ. ಕಾವೇರಿ (ಕೆಎನ್: 2008). ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ಬೆಂಗಳೂರು. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹುದ್ದೆಯಲ್ಲಿದ್ದ ನೇಮಕ ಮಾಡಲಾಗಿತ್ತು. ಬಿ. ಬಿ. ಕಾವೇರಿ ಅವರಿಗೆ ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಕಾರ್ಯದರ್ಶಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೆಚ್ಚುವರಿ ಹೊಣೆಯನ್ನು ಸಹ ನೀಡಲಾಗಿತ್ತು.

Edited By : Nirmala Aralikatti
PublicNext

PublicNext

10/10/2024 01:43 pm

Cinque Terre

33.85 K

Cinque Terre

0

ಸಂಬಂಧಿತ ಸುದ್ದಿ