ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕೋವಿಡ್ ಹಗರಣದ ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: ಕೋವಿಡ್ ಹಗರಣದ ತನಿಖೆಗೆ ಎಸ್‌ಐಟಿ ರಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.

ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಆಯೋಗ ಮಧ್ಯಂತರ ವರದಿ ಕೊಟ್ಟಿರುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಆಯೋಗ ನೀಡಿರುವ ವರದಿಯಲ್ಲಿ 11 ಸಂಪುಟಗಳಲ್ಲಿ‌ 7223.64 ಕೋಟಿ ಮೊತ್ತದ ಅವ್ಯವಹಾರ ಆಗಿದೆ ಅಂತ ವರದಿ ನೀಡಿತ್ತು. ಅಲ್ದೇ 500 ಕೋಟಿ ಮೊತ್ತ ವಸೂಲಾತಿಗೆ ಆಯೋಗ ಶಿಫಾರಸ್ಸು ಮಾಡಿದೆ. 55 ಸಾವಿರ ಕಡತಗಳನ್ನ ಸಂಬಂಧಿಸಿದ ಇಲಾಖೆಗಳಿಂದ ವರದಿ ನೀಡಿತ್ತು.

ಈ ಸಂಬಂಧ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಸಿದ ಬಳಿಕ ಕೋವಿಡ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲು ತೀರ್ಮಾನಿಸಲಾಗಿದೆ ಜೊತೆಗೆ ಸಚಿವ ಸಂಪುಟ ಉಪ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ.

Edited By : Abhishek Kamoji
PublicNext

PublicNext

10/10/2024 03:19 pm

Cinque Terre

140.53 K

Cinque Terre

10

ಸಂಬಂಧಿತ ಸುದ್ದಿ