ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೃಣಾಲ್ ಶುಗರ್ಸ್ ಸಕ್ಕರೆ ಕಾರ್ಖಾನೆಗೆ ಧಾರವಾಡದ 19 ಗ್ರಾಮಗಳನ್ನ ಕಬ್ಬು ಮೀಸಲು ಕ್ಷೇತ್ರವಾಗಿಸಲು ಸಂಪುಟ ಸಭೆ ಅನುಮತಿ

ಬೆಂಗಳೂರು : ಮೃಣಾಲ್ ಶುಗರ್ಸ್ ಲಿ., ಪುಡಕಲಕಟ್ಟಿ, ಧಾರವಾಡ ತಾಲ್ಲೂಕು, ಧಾರವಾಡ ಜಿಲ್ಲೆ ಈ ಸಕ್ಕರೆ ಕಾರ್ಖಾನೆಯಿಂದ 7.50 ಕಿ.ಮೀ ತ್ರಿಜ್ಯಾಕಾರದಲ್ಲಿರುವ ಗ್ರಾಮಗಳನ್ನು ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರಿಂದ ಹಿಂಪಡೆಯುವುದು ಮತ್ತು ಮರುಹಂಚಿಕೆ ಮಾಡುವುದು ಸಮಂಜಸವಾಗಿರುತ್ತದೆ ಎಂದು ಪರಿಗಣಿಸಿ ಧಾರವಾಡ ಜಿಲ್ಲೆಯ 19 ಗ್ರಾಮಗಳನ್ನು ಕಬ್ಬು ಖರೀದಿಗಾಗಿ ಮರು ಹಂಚಿಕೆ ಮಾಡಿದೆ.

19 ಗ್ರಾಮಗಳನ್ನು ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಹಿಂಪಡೆದು ಮೆ|| ಮೃಣಾಲ್ ಶುಗರ್ಸಗೆ ಮೀಸಲು ಕ್ಷೇತ್ರವನ್ನಾಗಿ ಹಂಚಿಕೆ ಮಾಡಲಾಗಿದೆ. ಪುಡಕಲಕಟ್ಟೆ, ಉಪ್ಪಿನ ಬೆಟಗೇರಿ, ಹನುಮನಾಳ, ಕಲ್ಲೆ, ಕಬ್ಬೇನೂರ, ಕರಡಿಗುಡ್ಡ, ತಿಮ್ಮಾಪೂರ, ಮರೇವಾಡ, ಅಮ್ಮಿನಭಾವಿ, ಹಾರೋಬೆಳವಡಿ, ಕಲ್ಲೂರ, ಲೋಕೂರ, ಶಿಬಾರಗಟ್ಟಿ, ಯಾದವಾಡ, ಮುಳಮುತ್ತಲ, ಮಂಗಳಗಟ್ಟಿ, ಲಕಮಾಪೂರ, ದಾಸನಕೊಪ್ಪ ಮತ್ತು ಕುರುಬಗಟ್ಟೆ ಒಟ್ಟು 11 ಗ್ರಾಮಗಳನ್ನು ಈ ಸಕ್ಕರೆ ಕಾರ್ಖಾನೆಗೆ ಸೇರ್ಪಡೆ ಮಾಡಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ ರವರು ಸಚಿವ ಸಂಪುಟದ ಸಭೆಯ ತಿಳಿಸಿದರು.

Edited By : Abhishek Kamoji
PublicNext

PublicNext

10/10/2024 06:33 pm

Cinque Terre

10.76 K

Cinque Terre

1

ಸಂಬಂಧಿತ ಸುದ್ದಿ