ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಅಕ್ರಮ ಗಣಿಗಾರಿಕೆ ಕುರಿತು ತನಿಖೆಗೆ ನೇಮಕವಾಗಿದ್ದ SIT ಅವಧಿ 1 ವರ್ಷ ವಿಸ್ತರಣೆ - ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ಅಕ್ರಮ ಗಣಿಗಾರಿಕೆ ತನಿಖಾ ತಂಡದ ಅವಧಿ ವಿಸ್ತರಣೆ ಗಣಿಗಾರಿಕೆಯಲ್ಲಿ ನಡೆದ ತನಿಖೆಗಾಗಿ ಸೃಜಿಸಲಾಗಿರುವ ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದ ಕಾರ್ಯಾವಧಿಯನ್ನು ಇನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

113 ಕಬ್ಬಿಣ ಗಣಿ ರಫ್ತು ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. 2 ಪ್ರಕರಣಗಳಿಗೆ ಮಾನ್ಯ ಉಚ್ಛ ನ್ಯಾಯಾಲಯದ ತಡೆಯಾಜ್ಞೆ ಇದೆ. 8 ಪ್ರಕರಣಗಳಲ್ಲಿ ಸಿ.ಆರ್.ಪಿ.ಸಿ 173(8) ತನಿಖೆ ಬಾಕಿ ಇದ್ದು, ಅದಿರು ಮೌಲ್ಯಮಾಪನ ಸಮಿತಿಯ ವರದಿ ನಿರೀಕ್ಷಿಸಲಾಗಿದೆ.

6 ಪ್ರಕರಣಗಳು ತನಿಖಾ ಹಂತದಲ್ಲಿವೆ. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಕಾರ್ಯಾವಧಿಯನ್ನು ವಿಸ್ತರಿಸುವುದು ಸೂಕ್ತವೆಂದು ಸಚಿವ ಸಂಪುಟ ನಿರ್ಧಾರಿಸಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು.

Edited By : Abhishek Kamoji
PublicNext

PublicNext

10/10/2024 06:36 pm

Cinque Terre

20.9 K

Cinque Terre

1

ಸಂಬಂಧಿತ ಸುದ್ದಿ