ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ನೀವಿಲ್ಲ ಎಂಬ ಸತ್ಯ ಅರಗಿಸಿಕೊಳ್ಳೋದು ಕಷ್ಟ" : ರತನ್ ಟಾಟಾ ನಿಧನಕ್ಕೆ ಮಾಜಿ ಪ್ರೇಯಸಿಯ ಭಾವುಕ ನುಡಿ

ಖ್ಯಾತ ಕೈಗಾರಿಕೋದ್ಯಮಿ, ಅಜಾತಶತ್ರು ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ 86ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಟಾಟಾ ನಿಧನಕ್ಕೆ ಅವರ ಮಾಜಿ ಪ್ರೇಯಸಿ ಸಿಮಿ ಗರೆವಾಲ್​ ಭಾವುಕ ಪೋಸ್ಟ್​ ಮಾಡಿದ್ದಾರೆ.

ರತನ್ ಟಾಟಾ ಅವರ ನಿಧನದಿಂದ ಬಾಲಿವುಡ್ ಹಿರಿಯ ನಟಿ ಸಿಮಿ ಗರೆ​ವಾಲ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಸಿಮಿ ಅವರು ರತನ್ ಟಾಟಾ ಅವರ ನಿಧನದ ಬಗ್ಗೆ ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಅವರಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.

ಫೋಟೊವೊಂದನ್ನು ಅವರು ಹಂಚಿಕೊಂಡು, ನೀವು ಹೋಗಿದ್ದೀರೆಂದು ಎಲ್ಲರೂ ಹೇಳುತ್ತಿದ್ದಾರೆ, ನೀವು ನಮ್ಮ ಜತೆ ಇಲ್ಲ ಎನ್ನುವ ಸತ್ಯವನ್ನು ಅರಗಿಸಿಕೊಳ್ಳುವುದು ತುಂಬಾ ಕಷ್ಟ, ಹೋಗಿಬನ್ನಿ ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ 2011ರಲ್ಲಿ ನೀಡಿದ ಸಂದರ್ಶನದಲ್ಲಿ ಖ್ಯಾತ ಹಿಂದಿ ಸಿನಿಮಾ ನಟಿ ಸಿಮಿ ಸ್ವತಃ ಬಹಿರಂಗಪಡಿಸಿದ್ದರು.

ಸಿಮಿ ಅವರು ಪರಿಪೂರ್ಣ ವ್ಯಕ್ತಿ, ಹಾಸ್ಯ ಪ್ರಜ್ಞೆ ಕೂಡ ಚೆನ್ನಾಗಿತ್ತು, ಸಭ್ಯರು, ಎಂದೂ ಶ್ರೀಮಂತಿಕೆ ತೋರ್ಪಡಿಸಿರಲಿಲ್ಲ ಎಂದು ಹೇಳಿದ್ದರು. ಇಷ್ಟು ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಪ್ರೀತಿ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು, ಸಾಕಷ್ಟು ವರ್ಷಗಳ ಕಾಲ ಸಿಮಿ ಹಾಗೂ ರತನ್ ಒಳ್ಳೆಯ ಸ್ನೇಹಿತರಾಗಿದ್ದರು.

ಸಂದರ್ಶನವೊಂದರಲ್ಲಿ ಸ್ವತಃ ರತನ್ ಟಾಟಾ ಅವರು ನಾಲ್ಕು ಬಾರಿ ಪ್ರೀತಿಯಲ್ಲಿ ಬಿದ್ದಿದ್ದರೂ ಅದು ಮದುವೆಯ ಹಂತವನ್ನು ತಲುಪಲಿಲ್ಲ ಎಂದು ಬಹಿರಂಗಪಡಿಸಿದ್ದರು.

Edited By : Abhishek Kamoji
PublicNext

PublicNext

10/10/2024 09:49 pm

Cinque Terre

32.13 K

Cinque Terre

0