ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕೋವಿಡ್ ಹಗರಣ - ಡಿಸಿಎಂ ಡಿಕೆಶಿ ನೇತೃತ್ವದಲ್ಲಿ 6 ಸಚಿವರ ಸಚಿವ ಸಂಪುಟ ಉಪ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ ರಚಿಸಲು ತೀರ್ಮಾನಿಸಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಕೋವಿಡ್ ಹಗರಣದ ವರದಿ ಬಗ್ಗೆ ಕ್ರಮ ಕೈಗೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ 6 ಸಚಿವರ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದಾರೆ.

ಸಂಪುಟ ಉಪಸಮಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷರಾಗಿದ್ರೆ ಸಚಿವರಾದ ದಿನೇಶ್ ಗುಂಡೂರಾವ್, ಡಾ ಜಿ ಪರಮೇಶ್ವರ್, ಹೆಚ್ ಕೆ ಪಾಟೀಲ್ , ಪ್ರಿಯಾಂಕ ಖರ್ಗೆ, ಸಂತೋಷ ಲಾಡ್ ಮತ್ತು ಶರಣು ಪ್ರಕಾಶ್ ಪಾಟೀಲ್ ಸದಸ್ಯರಾಗಿ ಸಮಿತಿಯಲ್ಲಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯನ್ನ ರಾಜ್ಯ ಸರ್ಕಾರಕ್ಕೆ‌ ನೀಡಿತ್ತು.

ವರದಿಯಲ್ಲಿ ಬೃಹತ್ ಮಟ್ಟದ ಹಗರಣ ನಡೆದಿರುವುದು ಉಲ್ಲೇಖಿಸಿರುವುದರಿಂದ ಈ ಹಗರಣವನ್ನ ಎಸ್ ಐಟಿ ಮತ್ತು ಸಂಪುಟ ಉಪಸಮಿತಿ ರಚಿಸಲು ಸಂಪುಟ ಸಭೆ ತೀರ್ಮಾನಿಸಿತ್ತು.

ಅದ್ರಂತೆ ಆ ವರದಿ ಬಗ್ಗೆ ಕ್ರಮ ಕೈಗೊಳ್ಳಲು ಡಿಕೆ ಶಿವಕುಮಾರ್ ನೇತೃತ್ವದಲ್ಲಿ 6 ಸಚಿವರ ಸಚಿವ ಸಂಪುಟ ಉಪ ಸಮಿತಿಯನ್ನ ಸಿಎಂ ಸಿದ್ದರಾಮಯ್ಯ ರಚಿಸಿದ್ದಾರೆ.

Edited By : Abhishek Kamoji
PublicNext

PublicNext

10/10/2024 09:56 pm

Cinque Terre

61.95 K

Cinque Terre

11

ಸಂಬಂಧಿತ ಸುದ್ದಿ