ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿನಯ್‌ ಕುಲಕರ್ಣಿ ರೇಪ್‌ ಕೇಸ್‌ ಸಿಐಡಿ ತನಿಖೆಗೆ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಕೇಸ್ ಮತ್ತು ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ವಿರುದ್ದ ಶಾಸಕರು ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ಸರ್ಕಾರವು ವಹಿಸಿದೆ. ತನಗೆ ಜೀವ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಸಂಜಯನಗರ ಠಾಣೆಗೆ ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರು ದೂರು ನೀಡಿದ್ದರು.

ಹೌದು ಶಾಸಕ ವಿನಯ್‌ ಕುಲಕರ್ಣಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಿ ಮಹಿಳೆ ದೂರು ನೀಡಿದ್ದರೆ, ಇದಕ್ಕೆ ಪ್ರತಿಯಾಗಿ ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ಥರ ವಿರುದ್ಧ 2 ಕೋಟಿ ರೂ. ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ವಿನಯ್‌ ಕುಲಕರ್ಣಿ ಅವರು ದೂರು ನೀಡಿದ್ದಾರೆ.ಈ ಎರಡೂ ದೂರುಗಳ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಇದೀಗ ಸಿಐಡಿ ಪೊಲೀಸರು ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಹಾವೇರಿಯಲ್ಲಿ ರೈತಪರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ವೇಳೆ ವಿನಯ್ ಪರಿಚಯವಾಗಿದ್ದು, ನಂತರದ ದಿನಗಳಲ್ಲಿ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಸಭ್ಯತೆಯಿಂದ ಮಾತನಾಡುತ್ತಿದ್ದರು. ನಂತರದ ದಿನಗಳಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಸಂಭಾಷಣೆ ನಡೆಸುತ್ತಿದ್ದರು.

2022 ರಲ್ಲಿ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದಾಗ ಹೆಬ್ಬಾಳದ ತಮ್ಮ ಮನೆಗೆ ಕರೆಸಿಕೊಂಡಿದ್ದಲ್ಲದೆ, ದೇವನಹಳ್ಳಿ ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ನಡೆಸಿದರೆಂದು ಮಹಿಳೆ ದೂರು ನೀಡಿದ್ದಾರೆ.

ವಿನಾಕಾರಣ ದೂರುದಾರೆ ಮಹಿಳೆ ಹಾಗೂ ಸುದ್ದಿವಾಹಿನಿಯೊಂದರ ಮುಖ್ಯಸ್ಥರೊಬ್ಬರು ನನಗೆ ಕರೆ ಮಾಡಿ, ತಮಗೆ ಸೇರಿದ ಅಶ್ಲೀಲ ವಿಡಿಯೋಗಳಿವೆ ಎಂದು ಹೆದರಿಸಿ 2 ಕೋಟಿ ರೂ.ಗೆ ಬ್ಲ್ಯಾಕ್ ಮಾಡಿದ್ದಾರೆಂದು ಶಾಸಕ ವಿನಯ್‌ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ.

ಈ ಎರಡೂ ದೂರುಗಳನ್ನು ಸ್ವೀಕರಿಸಿರುವ ಸಂಜಯನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದರು. ಈ ನಡುವೆ ಸರ್ಕಾರ ಈ ಎರಡೂ ಪ್ರಕರಣಗಳ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದ್ದು, ಸಿಐಡಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

11/10/2024 08:06 am

Cinque Terre

43.72 K

Cinque Terre

1

ಸಂಬಂಧಿತ ಸುದ್ದಿ