ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ವಿಚಾರ : ಮುಸ್ಲಿಮರ ಒಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ರಾಜ್ಯದ ವಿವಿಧ ಪೋಲಿಸ್ ಠಾಣೆಗಳಲ್ಲಿ‌ ದಾಖಲಾಗಿರುವ 60 ಕ್ರಿಮಿನಲ್ ಮೊಕದ್ದಮೆಗಳನ್ನ ಹಿಂಪಡೆಯಲು ನಿನ್ನೆ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರಿಸಲಾಗಿದೆ. ಅದ್ರಲ್ಲೂ ಪ್ರಮುಖವಾಗಿ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ನಿರ್ಧಾರಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರನ್ನು ಒಲೈಕೆ ಮಾಡಲು ಕೇಸ್‌ ಹಿಂಪಡೆಯಲಾಗಿದೆ ಎಂದು ಕಿಡಿ ಕಾರಿದ್ದಾರೆ.

2022ರ ಏಪ್ರಿಲ್​ 16ರಂದು ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಹುಬ್ಬಳ್ಳಿ ಗಲಭೆ ಕೇಸ್​ ಹಿಂಪಡೆಯಲು ಡಿಸಿಎಂ ಡಿಕೆಶಿ, ಗೃಹ ಸಚಿವರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಂಪುಟ ಸಭೆಯು ಹುಬ್ಬಳ್ಳಿಯ ಗಲಭೆ ಕೇಸ್ ವಾಪಸ್ ಪಡೆದಿದೆ. ಸಂಪುಟದ ಈ ನಿರ್ಧಾರ ಈಗ ತೀವ್ರ ವಿವಾದ ಸೃಷ್ಟಿಸಿದೆ.

Edited By : Nagaraj Tulugeri
PublicNext

PublicNext

11/10/2024 03:38 pm

Cinque Terre

30.17 K

Cinque Terre

9

ಸಂಬಂಧಿತ ಸುದ್ದಿ