ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ

ಮುಂಬೈ: ಟಾಟಾ ಟ್ರಸ್ಟ್‌ ಅಧ್ಯಕ್ಷ ಸ್ಥಾನಕ್ಕೆ ರತನ್ ಟಾಟಾ ಅವರ ಮಲಸಹೋದರ ಹಾಗೂ ಟ್ರೆಂಟ್ ಅಧ್ಯಕ್ಷ ನೋಯೆಲ್ ಟಾಟಾ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತದ ಹೆಸರಾಂತ ಕೈಗಾರಿಕೋದ್ಯಮಿ, ಲೋಕೋಪಕಾರಿ ರತನ್ ಟಾಟಾ ಅವರ ನಿಧನದ ಬೆನ್ನಲ್ಲೇ ಯಾರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಬೇಕು ಎಂಬ ಪ್ರಶ್ನೆ ಎದ್ದಿತ್ತು. ಈ ವಿಚಾರದಲ್ಲಿ ನೋಯೆಲ್ ಟಾಟಾ ಅವರು ಅವಿರೋಧ ಆಯ್ಕೆಯಿಂದ ಈಗ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.

ಉತ್ತರಾಧಿಕಾರಿ ಪಟ್ಟಕ್ಕೆ ನಾಲ್ವರ ಹೆಸರಿನ ಪೈಕಿ ನೋಯೆಲ್ ಟಾಟಾ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದ್ರೆ, ಈ ಮಧ್ಯೆ ಅವಿರೋಧ ಆಯ್ಕೆಯಲ್ಲಿ ದಿವಗಂತ ರತನ್ ಟಾಟಾ ಅವರ ಉತ್ತರಾಧಿಕಾರಿ ಸ್ಥಾನವನ್ನು ಇದೀಗ ನೋಯೆಲ್ ತುಂಬಿದ್ದಾರೆ.

67 ವರ್ಷದ ನೋಯೆಲ್ ಈಗಾಗಲೇ ಸರ್ ದೊರಾಬ್ಜಿ ಟಾಟಾ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್‌ನ ಟ್ರಸ್ಟಿಯಾಗಿದ್ದಾರೆ, ಇದು ಟಾಟಾ ಸನ್ಸ್‌ನಲ್ಲಿ 66% ಪಾಲನ್ನು ಹೊಂದಿದೆ. 2019ರಲ್ಲಿ ಸರ್ ರತನ್ ಟಾಟಾ ಟ್ರಸ್ಟ್‌ನ ಟ್ರಸ್ಟಿಯಾಗಿ ಸೇರಿಕೊಂಡಿದ್ದ ಇವರು 2022ರಲ್ಲಿ ಸರ್ ದೊರಾಬ್ಜಿ ಟ್ರಸ್ಟ್ ಮಂಡಳಿಗೂ ನೇಮಕಗೊಂಡಿದ್ದರು.

ರತನ್‌ ಟಾಟಾ ಅವರ ತಂದೆ ನೇವಲ್ ಎರಡು ಮದುವೆಯಾಗಿದ್ದರು. ಮೊದಲ ಪತ್ನಿ ಸೂನಿ ಕಮಿಶರಿಯಟ್, ಎರಡನೇ ಪತ್ನಿ ಸ್ವಿಟ್ಜರ್ಲೆಂಡ್‌ನ ಉದ್ಯಮಿ ಸಿಮೋನ್ ಡ್ಯುನೊಯರ್‌. ನೇವಲ್ ಮತ್ತು ಸೂನಿ ದಂಪತಿಗೆ ರತನ್‌ ಮತ್ತು ಜಿಮ್ಮಿ ಟಾಟಾ ಜನಿಸಿದರು. 1940 ರದಶಕದಲ್ಲಿ ನೇವಲ್ ಮತ್ತು ಸೂನಿ ದಂಪತಿ ಬೇರ್ಪಟ್ಟಿದ್ದರು. ಬೇರ್ಪಟ್ಟ ನಂತರ ಸಿಮೋನ್ ಡ್ಯುನೊಯರ್‌ ಅವರನ್ನು 1955 ರಲ್ಲಿ ನೇವಲ್ ವಿವಾಹವಾದರು. ಈ ದಂಪತಿಯ ಪುತ್ರನೇ ನೇಯಲ್‌ ಟಾಟಾ.

Edited By : Vijay Kumar
PublicNext

PublicNext

12/10/2024 07:25 am

Cinque Terre

18.12 K

Cinque Terre

0