ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

ಹಾವೇರಿ: ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆಯಿಂದ ರಾತ್ರಿವರೆಗೆ ಧಾರಾಕಾರ ಮಳೆಯಾಗಿದೆ. ಹಾವೇರಿ ನಗರದ SP ಕಚೇರಿ ಮುಂದಿನ ರಸ್ತೆ, ಪ್ರವಾಸಿಮಂದಿರದ ಮುಂದಿನ ರಸ್ತೆಯಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದೆ. ಸವಾರರು, ಪಾದಚಾರಿಗಳು ಸಂಚರಿಸಲು ಪರದಾಡುತ್ತಿದ್ದಾರೆ .

ಕಳೆದ ಎರಡು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇತ್ತ ಸವಣೂರು ತಾಲೂಕಿನ ಮಾವೂರು ಗ್ರಾಮದ ರೇಣುಕಾಚಾರ್ಯ ನಗರದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದೆ.

ಸುಮಾರು 10ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರು ಹೊರ ಹಾಕಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಪ್ರತಿ ವರ್ಷದ ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಎಂದು ಮಾವೂರು ಗ್ರಾಮಸ್ಥರು ಆರೋಪಿಸಿದ್ದಾರೆ. ಅಧಿಕಾರಿಗಳು ಜನಪ್ರತಿನಿಧಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Edited By : Manjunath H D
PublicNext

PublicNext

12/10/2024 02:27 pm

Cinque Terre

29.34 K

Cinque Terre

0

ಸಂಬಂಧಿತ ಸುದ್ದಿ