ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕ ಚಿರತೆ

ಹಾಸನ: ಹಾಸನದ ಹೊರವಲಯದ ಗೆಂಡೆಕಟ್ಟೆ ಅರಣ್ಯದ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿದೆ.

ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಸಾಕು ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕಿತ್ತು. ಹಗಲು ವೇಳೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದರು.

ಪುರುಷೋತ್ತಮ್ ಎಂಬುವರ ಕೋಳಿ ಫಾರಂ ಬಳಿ ಅರಣ್ಯ ಇಲಾಖೆಯ ಸಿಬ್ಬಂದಿ ಬೋನು ಇಟ್ಟಿದ್ದರು. ಇಂದು ಮುಂಜಾನೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಎರಡು ವರ್ಷದ ಚಿರತೆ ಸೆರೆಯಾಗಿದೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Shivu K
PublicNext

PublicNext

12/10/2024 02:39 pm

Cinque Terre

28.33 K

Cinque Terre

0