ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ದಸರಾ ಉಚಿತ ಪಾಸ್ ಮಾರಾಟ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ದಸರಾ ಪಾಸ್ ಅನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.

ಅರಮನೆಯ ಹೊರ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗೆ ಅವಕಾಶ ಕಲ್ಪಿಸಿರುವ ಪಾಸುಗಳನ್ನು ಸುಮಾರು ಒಂದು ಸಾವಿರದಿಂದ ಎರಡು ಸಾವಿರದ ತನಕ ಹಣ ಪಡೆದು ಮಾರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಸಾರ್ವಜನಿಕರ ಪಾಸ್ ಸಿಕ್ಕಿದೆ. ಸಾರ್ವಜನಿಕರು ಏನು ಮಾಡಬೇಕು ಎಂದು ಜನ ಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ. ವಿಜಯಕುಮಾರ್ ಆಕೋಶ ವ್ಯಕ್ತಪಡಿಸುತ್ತಾರೆ.

ಪಾಸುಗಳನ್ನು ಮಾರಾಟ ಮಾಡುತ್ತಿರುವುದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟಿದ್ದಾರೆ.

ಕೂಡಲೇ ಅಕ್ರಮವಾಗಿ ಉಚಿತವಾಗಿ ನೀಡಿರುವ ದಸರಾ ಪಾಸ್‌ಗಳನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Edited By : Shivu K
PublicNext

PublicNext

12/10/2024 06:48 pm

Cinque Terre

41.11 K

Cinque Terre

3

ಸಂಬಂಧಿತ ಸುದ್ದಿ