ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ರೇಣುಕಾಸ್ವಾಮಿ ಕೊಲೆ ಕೇಸ್‌ - ಎ13 ದೀಪಕ್‌ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ13 ದೀಪಕ್‌ಗೆ 57ನೇ ಸಿಸಿಎಚ್‌ ಕೋರ್ಟ್‌ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಎ.13 ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರ ವಿರುದ್ಧ ಸಾಕ್ಷ್ಯ ನಾಶದ ಆರೋಪ ಮಾತ್ರವೇ ಇದೆ. ಹೀಗಾಗಿ ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.

ಸರ್ಕಾರಿ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್‌, ಎ.13 ದೀಪಕ್ ವಿರುದ್ಧ ಸಾಕ್ಷ್ಯ ನಾಶದ ಆರೋಪ ಮಾತ್ರವೇ ಇದ್ದು, ಕೊಲೆ ಆರೋಪವಿಲ್ಲ. ಹೀಗಾಗಿ ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ವಾದಿಸಿದರು.

ಇನ್ನು ಎ8 ರವಿಶಂಕರ್ ಚಾಲಕನಾದರೂ ಅಪಹರಣದಲ್ಲಿ ಪಾತ್ರವಿದೆ. ಆತನ ಬಟ್ಟೆಯಲ್ಲಿಯೂ ಮೃತ ರೇಣುಕಾಸ್ವಾಮಿ ರಕ್ತದ ಕಲೆಗಳು ಪತ್ತೆಯಾಗಿವೆ. ಹೀಗಾಗಿ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್, ಎ11 ನಾಗರಾಜು ಹಾಗೂ ಎ12 ಲಕ್ಷ್ಮಣ್ ಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

Edited By : Vijay Kumar
PublicNext

PublicNext

14/10/2024 05:26 pm

Cinque Terre

206.05 K

Cinque Terre

1