ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ

ಮಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತುಳುನಾಡಿನ ಕಾರ್ಣಿಕ ದೈವ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದರು. ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ದಂಪತಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಿವರಾಜ್ ಕುಮಾರ್, ಕರಾವಳಿಯಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ. ಆದರೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಏನೋ ಒಂದು ನೆಮ್ಮದಿ ಸಿಕ್ಕಂತಾಗುತ್ತದೆ. ನನಗೆ ಕೊರಗಜ್ಜನಲ್ಲಿ ಅಪಾರ ನಂಬಿಕೆಯಿದೆ. ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರೆ ಎಲ್ಲಾ ಒಳ್ಳೆದಾಗುತ್ತೆ ಎಂಬ ನಂಬಿಕೆಯಿದೆ. ಸದ್ಯ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದೇವೆ. ಎಲ್ಲವೂ ಒಳ್ಳೆದಾಗುತ್ತದೆ ಎಂದು ನಂಬಿದ್ದೇವೆ ಎಂದು ಹೇಳಿದರು.

Edited By : Manjunath H D
PublicNext

PublicNext

14/10/2024 06:04 pm

Cinque Terre

33.24 K

Cinque Terre

0

ಸಂಬಂಧಿತ ಸುದ್ದಿ