ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೀಗಿ ಹುಣ್ಣಿಮೆ : ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ : ಶೀಗಿಹುಣ್ಣಿಮೆಯ ಪ್ರಯುಕ್ತ ಸೌದತ್ತಿ ಶ್ರೀ ರೇಣುಕಾ ದೇವಿಯ ದರ್ಶನಕ್ಕಾಗಿ ಯಲ್ಲಮ್ಮನ ಗುಡ್ಡಕ್ಕೆ ಹೋಗಿ ಬರುವ ಭಕ್ತಾದಿಗಳು ಹಾಗೂ ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಅಕ್ಟೋಬರ್‌ 17ರಂದು ಗುರುವಾರ ಹಾಗೂ 18ರಂದು ಶುಕ್ರವಾರ ಹುಬ್ಬಳ್ಳಿ ಮತ್ತು ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಪ್ರತಿ ವರ್ಷ ಶೀಗಿ ಹುಣ್ಣಿಮೆಯ ದಿನ ಹುಬ್ಬಳ್ಳಿ, ನವಲಗುಂದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಸೌದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕಾಗಿ ಯಲ್ಲಮ್ಮನ ಗುಡ್ಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಹೋಗಿಬರುತ್ತಾರೆ. ಈ ಬಾರಿ ಅಕ್ಟೋಬರ್ 17ರಂದು ಗುರುವಾರ ಶೀಗಿ ಹುಣ್ಣಿಮೆ ಹಾಗೂ 18ರಂದು ಶುಕ್ರವಾರ ದೇವಿಯ ವಾರದ ನಿಮಿತ್ಯ ಹೆಚ್ಚಿನ ಜನರ ಸಂಚಾರ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ದೇವಿಯ ದರ್ಶನಕ್ಕೆ ಹೋಗಿ ಬರುವ ಭಕ್ತಾಧಿಗಳು ಹಾಗೂ ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಹಾಗೂ ನವಲಗುಂದದಿಂದ ನೇರವಾಗಿ ಸೌದತ್ತಿ ಯಲ್ಲಮ್ಮನಗುಡ್ಡಕ್ಕೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ವಿಶೇಷ ಬಸ್ಸುಗಳು ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ.

ಹುಬ್ಬಳ್ಳಿ - ಯಲ್ಲಮ್ಮನ ಗುಡ್ಡ: ಈ ಬಸ್ಸುಗಳು ಧಾರವಾಡ, ಅಮ್ಮಿನಭಾವಿ, ಸೌದತ್ತಿ ಮಾರ್ಗವಾಗಿ ಯಲ್ಲಮ್ಮನಗುಡ್ಡಕ್ಕೆ ಸಂಚರಿಸುತ್ತವೆ.

ನವಲಗುಂದ - ಯಲ್ಲಮ್ಮನ ಗುಡ್ಡ ಈ ಬಸ್ಸುಗಳು ನವಲಗುಂದ ಬಸ್ ನಿಲ್ದಾಣ ದಿಂದ ಹೊರಡುತ್ತವೆ. ಗೊಬ್ಬರ ಗುಂಪಿ ಕ್ರಾಸ್, ಗೊಬ್ಬರ ಗುಂಪಿ, ಅಳಗವಾಡಿ ಹಂಚಿನಾಳ, ಹಿರೇಕುಂಬಿ ಮಾರ್ಗವಾಗಿ ಸಂಚರಿಸುತ್ತವೆ.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/10/2024 10:23 pm

Cinque Terre

62.85 K

Cinque Terre

1

ಸಂಬಂಧಿತ ಸುದ್ದಿ