ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಯನ್ನು ಬಂಧಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ನರಸಿಂಹನಂದಾ ಸರಸ್ವತಿ ಮನುಷ್ಯ ವಿರೋಧಿ. ಜೀವ ವಿರೋಧಿಯಾದ ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಯನ್ನು ದೇಶದ್ರೋಹದ ಪ್ರಕರಣದಡಿ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಮಜ್ಲಿಸೆ ಇಸ್ಲಹ-ವ-ತಂಝೀಮ್ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ಭಾರೀ ಪ್ರತಿಭಟನೆ ಮಾಡಿತು.

ಅಲ್ಲದೆ, ಸಹಾಯಕ ಕಮಿಷನರ್ ನಯನಾ ಮೂಲಕ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳದ ಜಾಮಿಯಾ ಮಸೀದಿ ಖತೀಬ್ ಮತ್ತು ಇಮಾಮ್ ಮೌಲಾನ ಅಬ್ದುಲ್ ಅಲೀಮ್ ಕತೀಬ್ ನದ್ವಿ, ಪ್ರವಾದಿ ಮುಹಮ್ಮದ್ ರನ್ನು ವಿರೋಧಿಸುವವ ಕೇವಲ ಮುಸ್ಲಿಮರ ವಿರೋಧಿಯಲ್ಲ. ಆತ ಹಿಂದೂ ವಿರೋಧಿಯೂ ಆಗಿದ್ದಾನೆ ಎಂದರು. ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಎಲ್ಲ ಧರ್ಮದ ಧಾರ್ಮಿಕ ಪುಸ್ತಕಗಳಲ್ಲಿ ಅವರನ್ನು ದೇವನ ಸಂದೇಶವಾಹಕರೆಂದು ಕರೆದಿವೆ. ಇಂತಹ ಪ್ರವಾದಿಯನ್ನು ನಿಂದಿಸುವಾತ ಕೇವಲ ಇಸ್ಲಾಮ್ ವಿರೋಧಿಯಲ್ಲ , ಬದಲಾಗಿ ಎಲ್ಲ ಧರ್ಮದ ವಿರೋಧಿಯಾಗಿದ್ದಾನೆ ಎಂದರು.

ನರಸಿಂಹನಂದಾ ಸರಸ್ವತಿ ಸ್ವಾಮಿ ಹಿಂದೂ ಧರ್ಮದ ವಿರೋಧಿಯೂ ಆಗಿದ್ದಾನೆ. ಈತ ಈ ದೇಶದ ವಿರೋಧಿಯೂ ಆಗಿದ್ದಾನೆ ಎಂದರು. ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಮ್ಮ ದೇಶ ಎಲ್ಲ ಧರ್ಮ, ಜಾತಿ ಜನಾಂಗವನ್ನು ಸಮಾನವಾಗಿ ಕಾಣುತ್ತದೆ. ಇಂತಹ ದೇಶದಲ್ಲಿರುವ ಈ ವ್ಯಕ್ತಿ ಇಡೀ ದೇಶಕ್ಕೆ ದ್ರೋಹ ಎಸಗುತ್ತಿದ್ದಾನೆ. ಈತನ ಬಂಧನದ ಕುರಿತು ಕೇವಲ ಮುಸ್ಲಿಮರಷ್ಟೇ ಅಲ್ಲ ಹಿಂದೂಗಳು ಕೂಡ ಆಗ್ರಹಿಸಬೇಕು ಎಂದರು.

ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮನವಿ ಸಲ್ಲಿಸಿ ಮಾತನಾಡಿ, ಪ್ರವಾದಿ ಮುಹಮ್ಮದರು , ಇಡೀ ಮನುಷ್ಯರ ಮಾರ್ಗದರ್ಶನಕ್ಕಾಗಿ ಬಂದಿದ್ದರು. ಅವರನ್ನು ನಿಂದಿಸುವುದು ಎಂದರೆ ಇಡಿ ಮನುಷ್ಯರನ್ನು ನಿಂದಿಸಿದಂತೆ. ಇಂತಹ ವ್ಯಕ್ತಿಯನ್ನು ಬಂಧಿಸದೆ ಇದ್ದರೆ ನಾವು ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರವಾರ ಚಲೋ ನಡೆಸಬೇಕಾಗುತ್ತದೆ. ಇಂದು ಶಾಂತರೀತಿಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ನಾಳೆ ಇದೇ ರೀತಿಯ ಶಾಂತರೀತಿಯಲ್ಲಿ ಎಲ್ಲರೂ ಭಟ್ಕಳ ಬಂದ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದರು.

ತಂಝೀಮ್ ರಾಜಕೀಯ ಸಮಿತಿ ಸಂಚಾಲಕ ಇಮ್ರಾನ್ ಲಂಕಾ ಮನವಿ ಪತ್ರ ಓದಿದರು. ಸಹಾಯಕ ಆಯುಕ್ತೆ ಡಾ. ನಯಾನ ಎಂ. ಮನವಿ ಪತ್ರ ಸ್ವೀಕರಿಸಿ, ಮನವಿಯನ್ನು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ‌, ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ, ಭಟ್ಕಳ ಮುಸ್ಲಿಮ್ ಯೂತ್ ಫೆಡರೇಶನ್ ಮಾಜಿ ಅಧ್ಯಕ್ಷ ಅಝೀಝುರ್ರಹ್ಮಾನ್ ನದ್ವಿ, ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹಲ್ಲಾರೆ ಸೇರಿದಂತೆ ವಿವಿಧ ಜಮಾಅತ್ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Ashok M
PublicNext

PublicNext

15/10/2024 07:35 am

Cinque Terre

38.07 K

Cinque Terre

0

ಸಂಬಂಧಿತ ಸುದ್ದಿ