ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಷೇರು ವ್ಯವಹಾರದಲ್ಲಿ ನಷ್ಟ - ಮಾಜಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಾರ್ಕಳ: ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ಬ್ಯಾಂಕಿನ ಮಾಜಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು ಬೆಳ್ಳಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ. ಮೃತರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಮನೆಯಲ್ಲಿ ಇದ್ದರು. ತದನಂತರ ಅವರು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದರು. ಈ ವಿಚಾರವಾಗಿ ಮಾನಸಿಕವಾಗಿ ನೊಂದ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

15/10/2024 10:36 am

Cinque Terre

3.76 K

Cinque Terre

0

ಸಂಬಂಧಿತ ಸುದ್ದಿ