ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಕೃಷ್ಣ ಬೈರೇಗೌಡ V/S ವಿಪಕ್ಷ ನಾಯಕ ಆರ್ ಅಶೋಕ್ ನಡುವೆ ಕಡಲೆಕಾಯಿ ಜಗಳ..!

ಬೆಂಗಳೂರು : ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟೂ ಕನಿಷ್ಠ ಜ್ಞಾನ ವಿಪಕ್ಷ ನಾಯಕನಿಗೆ ಇಲ್ಲದಿರುವುದು ಈ ನಾಡಿನ ದೌರ್ಭಾಗ್ಯ ಎಂದು ಸಚಿವ ಕೃಷ್ಣ ಬೈರೇಗೌಡ ವಿಪಕ್ಷ ವಿಪಕ್ಷ ನಾಯಕರಾದ ಆರ್ ಅಶೋಕ್ ಅವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹಾಗೂ ಈ ಹಿಂದೆ ಕಂದಾಯ ಇಲಾಖೆಯ ಸಚಿವರಾಗಿಯೂ ಇದ್ದವರಿಗೆ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು ಆಯೋಗದ ನಡುವಿನ ವ್ಯತ್ಯಾಸವೂ ತಿಳಿಯದಿರುವುದು ಅಚ್ಚರಿಯ ವಿಚಾರ. ಸಿಎಂ ಸಿದ್ದರಾಮಯ್ಯನವರನ್ನು ಟೀಕಿಸುವ ಬರದಲ್ಲಿ ನನ್ನ ವಿರುದ್ಧವೂ ಕೀಳುಮಟ್ಟದ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕುದಾದ ನಡೆ ಅಲ್ಲ.

“ಜಿಎಸ್ಟಿ ಸಭೆಗೆ ಹೋಗುವ ಪ್ರತಿನಿಧಿ ಕಡಲೆಕಾಯಿ ತಿನ್ನುತ್ತಾರಾ?” ಎಂದು ಪ್ರಶ್ನಿಸಿರುವ ಆರ್. ಅಶೋಕ್ ಅವರೇ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು ಆಯೋಗ ಇವೆರಡೂ ಬೇರೆ ಬೇರೆ ಎಂಬ ಕುರಿತು ಕಡಲೆಕಾಯಿ ಬೆಳೆಯುವ ನಮ್ಮ ನಾಡಿನ ಸಾಮಾನ್ಯ ರೈತನಿಗೆ ಇರುವಷ್ಟೂ ಕನಿಷ್ಠ ಜ್ಞಾನ ವಿಪಕ್ಷ ನಾಯಕನಾದ ತಮಗೆ ಇಲ್ಲದಿರುವುದು ಈ ನಾಡಿನ ದೌರ್ಭಾಗ್ಯ ಎಂದು ಆರ್ ಅಶೋಕ್ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತಿಯಾಗಿ ಕೃಷ್ಣ ಬೈರೇಗೌಡರಿಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಆರ್ ಅಶೋಕ್,ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು 'ಕನಿಷ್ಠ ಜ್ಞಾನ' ಎಂದು ರೈತರನ್ನು ಯಾಕೆ ಹೀಯಾಳಿಸುತ್ತೀರಿ ಸನ್ಮಾನ್ಯ ಕೃಷ್ಣ ಬೈರೇಗೌಡರೇ. ಎಲ್ಲರಿಗೂ ತಮ್ಮ ರೀತಿ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ.

ಜಿಎಸ್ ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್ ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್ಯಾರಾದರೂ ಪ್ರತಿನಿಧಿ ಮಂತ್ರಿಗಳು ಬಂದಿರುತ್ತಾರೆ ಅಲ್ಲವೇ? ಇಂತಹ ವೇದಿಕೆಯಲ್ಲಿ ಅನೌಪಚಾರಿಕವಾಗಿ ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಿ ಒಂದು ಒಮ್ಮತ ಸೃಷ್ಟಿಸುವ ಪ್ರಯತ್ನ ಮಾಡಬಹುದಿತ್ತಲ್ಲವೇ? ನನ್ನ ಮಾತಿನ ಅರ್ಥ ಇದಾಗಿತ್ತು.

ಕೇರಳದಲ್ಲಿ ಇತ್ತೀಚೆಗೆ ಐದು ಬಿಜೆಪಿಯೇತರ ಸರ್ಕಾರಗಳ ಪ್ರತಿನಿಧಿಗಳು ಒಟ್ಟಿಗೆ ಸೇರಿ ಸಭೆ ಮಾಡಿದರಲ್ಲ, ಅದು ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸುವ ವೇದಿಕೆನಾ?ವೇದಿಕೆಗಳ ಮೇಲೆ ರಾಜಕೀಯ ಭಾಷಣ ಮಾಡಿ ಕೇಂದ್ರ ಸಚಿವರಿಗೆ ಬಹಿರಂಗ ಚರ್ಚೆಗೆ ಬರಲು ಸವಾಲು ಹಾಕುತ್ತೀರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಲು ಅದು ವೇದಿಕೆನಾ? ದೆಹಲಿ ಚಲೋ ಅಂತ ಬೀದಿನಾಟಕ ಮಾಡಿ, ಜಂತರ್ ಮಂತರ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚೆ ಮಾಡಲು ಅದು ವೇದಿಕೆನಾ ಎಂದು ಪ್ರಶ್ನಿಸಿದ್ದಾರೆ.

Edited By : Nirmala Aralikatti
PublicNext

PublicNext

15/10/2024 01:39 pm

Cinque Terre

97.59 K

Cinque Terre

2

ಸಂಬಂಧಿತ ಸುದ್ದಿ