ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸರ್ಕಾರದ ವಿರುದ್ಧ ರೈತರಿಂದ ಬಾರಕೋಲು ಚಳುವಳಿ

ಬೆಳಗಾವಿ: ಕಬ್ಬಿನ ದರ ಹೆಚ್ಚಳ ಮಾಡುವಂತೆ ರೈತರು ಬೃಹತ್ ಪ್ರತಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಬಾರಕೋಲ ಚಳುವಳಿ ನಡೆಸಿದ್ದಾರೆ.‌

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆ ವತಿಯಿಂದ ನಗರದ ಚೆನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.‌ ಕಬ್ಬಿನ ದರ ಹೆಚ್ಚಳ ಮಾಡುವಂತೆ ಬಾರಕೋಲ ಚಳುವಳಿ ನಡೆಸಿದ ರೈತರು, ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬು ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳದೆ ಇದ್ದರೆ ರಾಜ್ಯ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

Edited By : Somashekar
PublicNext

PublicNext

15/10/2024 01:44 pm

Cinque Terre

17.75 K

Cinque Terre

0

ಸಂಬಂಧಿತ ಸುದ್ದಿ