ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ಹಾನಗಲ್ಲ: ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ಶ್ರೀನಿವಾಸ ಮಾನೆ ಲೋಕೋಪಯೋಗಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಹಾಗೂ 2023-24 ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಅಕ್ಕಿವಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 3 ಕೋಟಿ ಅನುದಾನದಲ್ಲಿ ಅಕ್ಕಿವಳ್ಳಿ, ಅರಳೇಶ್ವರ, ಕಂಚಿನೆಗಳೂರು, ಹರವಿ ರಸ್ತೆ, ಮುಖ್ಯಮಂತ್ರಿಗಳ ರೂ. 15 ಕೋಟಿ ವಿಶೇಷ ಅನುದಾನದಡಿ ಶಿರಗೋಡ ಗ್ರಾಮದಲ್ಲಿ ರೂ.61.50 ಲಕ್ಷ ವೆಚ್ಚದಲ್ಲಿ ಶಿರಗೋಡ, ಹನುಮನಕೊಪ್ಪದಿಂದ ಅವಲಗೇರಿಕೊಪ್ಪ ರಸ್ತೆ ಅಭಿವೃದ್ಧಿ ಹಾಗೂ ಬದಾಮಗಟ್ಟಿ ಗ್ರಾಮದಲ್ಲಿ ರೂ. 38 ಲಕ್ಷ ವೆಚ್ಚದಲ್ಲಿ ಬದಾಮಗಟ್ಟಿ, ದೇವರಹೊಸಪೇಟೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

2023-24 ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಅನುದಾನದಡಿ ಕಲ್ಲಾಪುರ ಹಾಗೂ ಹಿರೂರು ಗ್ರಾಮಗಳಲ್ಲಿ ತಲಾ ರೂ. 40 ಲಕ್ಷ ವೆಚ್ಚದಲ್ಲಿ, ಬಮ್ಮನಹಳ್ಳಿ ಗ್ರಾಮದಲ್ಲಿ ರೂ. 45 ಲಕ್ಷ ವೆಚ್ಚದಲ್ಲಿ ಹಾಗೂ ಯಳವಟ್ಟಿ ಗ್ರಾಮದಲ್ಲಿ ರೂ. 30 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಮಾನೆ, ತಾಲೂಕಿನಲ್ಲಿ ಹತ್ತು, ಹಲವು ರಸ್ತೆ ಅಭಿವೃದ್ಧಿ ಹಾಗೂ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮತ್ತಷ್ಟು ಅನುದಾನ ಬಿಡುಗಡೆಯಾಗಲಿದ್ದು, ಮತ್ತೆ ಹಂತ ಹಂತವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿರುವ ಪ್ರಮುಖ ರಸ್ತೆಗಳನ್ನು ಆದ್ಯತೆ ಆಧಾರದಲ್ಲಿ ಅಭಿವೃದ್ಧಿ ಕೈಗೊಳ್ಳಲಾಗಿದೆ. ನಿಗದಿತ ಕಾಲಾವಧಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಅಧಿಕಾರಿಗಳು, ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಸಾರ್ವಜನಿಕರೂ ಸಹ ಸಹಕಾರ ನೀಡಬೇಕಿದೆ ಎಂದರು.

Edited By : PublicNext Desk
Kshetra Samachara

Kshetra Samachara

15/10/2024 06:46 pm

Cinque Terre

6.64 K

Cinque Terre

0