ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ‌: ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ, ಮುಂದುವರೆದ ಮಳೆ

ಕೋಲಾರ‌ - ಕೋಲಾರ ನಗರ ಹಾಗೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಜಡಿ ಮಳೆಯಾಗುತ್ತಿರುವುದರಿಂದ ಜನರು ಹೊರಗೆ ತೆರಳಲು ಸಾಧ್ಯವಾಗದೆ ಹೈರಾಣಾಗಿದ್ದಾರೆ.

ಮತ್ತೊಂದು ಕಡೆಯಲ್ಲಿ ಹನಿ ಹನಿ ಮಳೆಯಿಂದಾಗಿ ಜಾನುವಾರುಗಳಿಗೆ ಮೇವು, ರೇಷ್ಮೆ ಹುಳುಗಳಿಗೆ ಸೊಪ್ಪು ಹೊಂದಿಸಲು ರೈತರು ಪರಿತಪಿಸುವಂತಾಯಿತು. ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಬೆಳಗಿನ ಪಾಳಿ ಕೆಲಸಕ್ಕೆ ತೆರಳುವ ನೌಕರರಿಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯಿಂದ ಹೊರ ಬರಲಾಗದೆ ಛತ್ರಿ, ಜರ್ಕಿನ್‌ಗಳ ಮೊರೆ ಹೋಗಿದ್ದು ಕಂಡು ಬಂತು. ಮಳೆ ಬಿಡುವು ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ವರುಣ ಮತ್ತಷ್ಟು ಜಡಿ ಮಳೆಯನ್ನು ಸುರಿಸುವುದರಿಂದ, ಕೆಲಸ ಕಾರ್ಯಗಳಿಗೆ ಅಡ್ಡಿಯುಂಟಾಯಿತು.

ಈಗಾಗಲೇ ಮಹಾಲಯ ಅಮಾವಾಸ್ಯೆಯಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ , ಇನ್ನು 2 ದಿನ ನಿರಂತರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Edited By : Nagesh Gaonkar
PublicNext

PublicNext

15/10/2024 07:26 pm

Cinque Terre

22.99 K

Cinque Terre

0