ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಪೂಂಜಾಲ ಕಟ್ಟೆ ಬಳಿ ಕಾರು ಪಲ್ಟಿ- ಮಹಿಳೆ ಸಾವು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬಿ.ಸಿ.ರೋಡು-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಬಳಿ ನಡೆದಿದ್ದು ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿ ಪುಟ್ಟಮಗು ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ಮೃತಪಟ್ಟ ಮಹಿಳೆಯನ್ನು ಮಂಗಳೂರು ಕೊಡಿಯಾಲ್ ಬೈಲ್ ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ.

ಚಾಲಕ ರೂಪೇಶ್ (39) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಕಾರು ಮುಂಜಾನೆ ಸುಮಾರು 4.30ರ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ.

ಮಂಗಳೂರು ಕೊಡಿಯಾಲ್‌ ಬೈಲು ನಿವಾಸಿಯಾದ ಭಾಗೀರಥಿ ಅವರ ಪುತ್ರಿ ಸುಚಿತ್ರಾ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ಭಾಗೀರಥಿ ದಸರಾ ರಜೆಯಲ್ಲಿ ಅಳಿಯ, ಮಗಳ ಜತೆ ತುಮಕೂರಿಗೆ ಹೋಗಿ ಮಂಗಳೂರಿಗೆ ಮರಳುತ್ತಿದ್ದಾಗ ದುರಂತ ಸಂಭವಿಸಿದೆ.

ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳು ನಡೆದಿವೆ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಇಲ್ಲಿ ಅಪಘಾತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

Edited By : PublicNext Desk
Kshetra Samachara

Kshetra Samachara

15/10/2024 07:51 pm

Cinque Terre

1.55 K

Cinque Terre

0

ಸಂಬಂಧಿತ ಸುದ್ದಿ