ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಗ್ರೇಟರ್ ರಾಜಾಸೀಟ್ ಅಕ್ರಮ - ತನಿಖೆ ಆರಂಭಿಸಿದ ಲೋಕಾಯುಕ್ತ

ಕೊಡಗು: ಮಡಿಕೇರಿಯಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ತನಿಖಾಧಿಕಾರಿ ತೇಜಶ್ರೀ ಬಿ.ಮದ್ದೋಡಿ ಲೋಕೋಪಯೋಗಿ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿ ದಾಖಲೆಗಳನ್ನು ಪರಿಶೀಲಿಸಿ ಸಂಗ್ರಹಿಸಿದರು.

ಗ್ರೇಟರ್ ರಾಜಾ ಸೀಟ್ ಇನ್ನೂ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೇ ಇರುವ ಬಗ್ಗೆ ಲೋಕೋಪಯೋಗಿ ಇಂಜಿನಿಯರ್ ಗಳಿಂದ ವಿವರಣೆ ಪಡೆದರು. ಉತ್ತರ ನೀಡಲು ತಡಬಡಿಸಿದ ಇಂಜಿನಿಯರ್ ಅನ್ನು ತರಾಟೆಗೆ ತೆಗೆದುಕೊಂಡರು. ನಿರ್ವಹಣೆ ಹೊತ್ತ ಎ.ಇ.ಇ ಮತ್ತು ಇ.ಇ ರವರಿಗೆ ಮಡಿಕೇರಿಗೆ ಬಂದು ತನಿಖೆಗೆ ಒಳಗಾಗಲು ಸೂಚನೆಯನ್ನು ನೀಡಿದ್ದಾರೆ.

Edited By : Nagesh Gaonkar
PublicNext

PublicNext

15/10/2024 07:53 pm

Cinque Terre

30.06 K

Cinque Terre

0

ಸಂಬಂಧಿತ ಸುದ್ದಿ