ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಅಗ್ನಿಶಾಮಕ ಸಿಬ್ಬಂದಿಯಿಂದ ಅಗ್ನಿ ಅವಘಡಗಳ ಪ್ರಾತ್ಯಕ್ಷಿಕೆ

ಚಳ್ಳಕೆರೆ: ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಶ್ರೀ ಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಪೌರತ್ವ ತರಬೇತಿ ಶಿಬಿರದ ಪ್ರಯುಕ್ತ ಪ್ರಶಿಕ್ಷಣಾರ್ಥಿಗಳಿಗಾಗಿ ಆಯೋಜಿಸಿದ್ದ ಅಗ್ನಿ ಅವಘಡಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಪ್ರವೀಣ್, ಯಾವುದೇ ರೀತಿಯ ಅಗ್ನಿ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ ಅವುಗಳನ್ನು ಪ್ರಾಥಮಿಕ ಹಂತದಲ್ಲಿಯೇ ಎದುರಿಸುವ ಜ್ಞಾನವನ್ನು ಪ್ರತಿಯೊಬ್ಬರು ಹೊಂದುವುದು ಅಗತ್ಯ. ಅದರಿಂದ ಸಂಭವಿಸಬಹುದಾದ ದೊಡ್ಡ ಅನಾಹುತಗಳನ್ನು ತಪ್ಪಿಸಲು ಸಾಧ್ಯ ಎಂದು ಅಗ್ನಿ ಅವಘಡಗಳ ಬಗ್ಗೆ ಪ್ರಾತ್ಯಕ್ಷಿಕೆಗಳ ಮೂಲಕ ಉಪನ್ಯಾಸ ನೀಡಿದರು.

ಈ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಇಲಾಖೆಯ ಠಾಣಾಧಿಕಾರಿ ನಿಜಗುಣ ಅವರು ಅಗ್ನಿ ಅವಘಡಗಳ ಬಗ್ಗೆ ಕಿರು ಮಾಹಿತಿ ನೀಡಿದರು.

Edited By : Manjunath H D
PublicNext

PublicNext

15/10/2024 07:59 pm

Cinque Terre

29.92 K

Cinque Terre

0

ಸಂಬಂಧಿತ ಸುದ್ದಿ