ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರ: ಬೆಳೆ ಸಾಲಕ್ಕೆ ಕೇಂದ್ರದಿಂದ ಬ್ಯಾಂಕ್‌ಗಳಿಗೆ ಬರಬೇಕಾದ ಆರ್ಥಿಕ ನೆರವು ಕಡಿಮೆಯಾಗುತ್ತಿದೆ - ಹೆಬ್ಬಾರ್

ಸಿದ್ದಾಪುರ: ಬೆಳೆ ಸಾಲ ವಿತರಣೆಗೆ ಸಂಬಂಧಿಸಿ ಕೇಂದ್ರ ಸರಕಾರದಿಂದ ಜಿಲ್ಲಾ ಸಹಕಾರ ಬ್ಯಾಂಕುಗಳಿಗೆ ಬರಬೇಕಾದ ಕಡಿಮೆ ಬಡ್ಡಿ ದರದ ಆರ್ಥಿಕ ನೆರವು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ಸಹಕಾರ ಸಂಘ ಸಂಸ್ಥೆಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ ಆಕ್ಷೇಪ ವ್ಯಕ್ತಪಡಿಸಿದರು..

ತಾಲೂಕಿನ ಕಂಚಿಕೈ ಸೇವಾ ಸಹಕಾರಿ ಸಂಘದ ಮೊದಲನೇ ಮಹಡಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿಯಮ ಪ್ರಕಾರ ಬೆಳೆ ಸಾಲದ ಶೇ.50ರಷ್ಟು ಮೊತ್ತವನ್ನು ಕೇಂದ್ರ ಸರಕಾರ, ನಬಾರ್ಡ್ ಸಂಸ್ಥೆ ನೀಡಬೇಕಾಗಿದೆ. ಆದರೆ ಈ ಪ್ರಮಾಣ ಕಡಿಮೆಯಾಗುತ್ತ ಬಂದಿದ್ದು ಶೇ. 20ಕ್ಕೆ. ಕುಸಿದಂತಾಗಿದೆ ಎಂದರು.

.

ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಪ್ರಸಕ್ತ ಮಳೆಗಾಲದಲ್ಲಿ ಅದಿಕೆ ಕೊಳೆ ರೋಗದಿಂದ ಅಪಾರ ಹಾನಿ ಅನುಭವಿಸಿದ ರೈತರಿಗೆ ಆರ್ಥಿಕ ನೆರವು ಮತ್ತು ಎಲೆ ಚುಕ್ಕೆ ರೋಗ ನಿಯಂತ್ರಣ ವಿಧಾನ ಸಂಶೋಧನೆಗೆ ಸರಕಾರದ ಮಟ್ಟದಲ್ಲಿ ತೀವ್ರ ಪ್ರಯತ್ನ ನಡೆಸುತ್ತಿರುವದಾಗಿ ತಿಳಿಸಿದರು.

ಟಿಎಂಎಸ್ ಅಧ್ಯಕ್ಷ ಆರ್ ಎಂ ಹೆಗಡೆ, ಟಿ ಎಸ್ ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.

ಗ್ರಾಪಂ ಅಧ್ಯಕ್ಷ ರಾಜಾರಾಮ ಹೆಗಡೆ, ಗ್ರಾಪಂ ಸದಸ್ಯ ರಾಘವೇಂದ್ರ ಹೆಗಡೆ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜಿತ ಶಿರಹಟ್ಟಿ, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಭಟ್ಟ ಮುಂತಾದವರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮೋಹನ ಮಡಿವಾಳ ಹಾಗೂ ನಿರ್ದೇಶಕರುಮುಖ್ಯ ಕಾರ್ಯನಿರ್ವಾಹಕ ರಮೇಶ ಹೆಗಡೆ ಪಾಲ್ಗೊಂಡರು. ಗಣೇಶ ಭಟ್ಟ ವಂದಿಸಿದರು.

Edited By : PublicNext Desk
Kshetra Samachara

Kshetra Samachara

15/10/2024 08:20 pm

Cinque Terre

3.48 K

Cinque Terre

0

ಸಂಬಂಧಿತ ಸುದ್ದಿ