ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮಕ್ಕಳ ರಕ್ಷಣಾ ಕಾರ್ಯಚರಣೆಗೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಚಾಲನೆ

ಬೆಳಗಾವಿ: ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ಹಾಗೂ ಕಾರ್ಮಿಕ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಮಕ್ಕಳ ಸಹಾಯವಾಣಿ-1098, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸ್ಪಂದನಾ ಸೇವಾ ಸಂಸ್ಥೆಗಳ ಸಹಯೊಗದೊಂದಿಗೆ ಅ.15 ರಂದು ಕ್ಷೀಪ್ರ ಕಾರ್ಯಾಚರಣೆ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿಯಿಂದ ನಗರದಲ್ಲಿ ಬೀದಿ ಬದಿ ಮಕ್ಕಳ (ಆಪರೇಷನ್ ಮುಸ್ಕಾನ್) ರಕ್ಷಣಾ ಕಾರ್ಯಚರಣೆಗೆ ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್‌ರವರು ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.

ಬೆಳಗಾವಿ ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ನಗರದಲ್ಲಿ ಮಕ್ಕಳನ್ನು ಬಾರ ಮತ್ತು ರೆಸ್ಟೋರೆಂಟ್, ಗ್ಯಾರೇಜ್, ಹೊಟೇಲ್ ಗಳು, ಧಾಬಾಗಳು ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದಲ್ಲಿ ಅಂತಹ ಮಾಲಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ವಿವಿಧ ನಗರಗಳಲ್ಲಿ ಮಕ್ಕಳನ್ನು ಬಾರ ಮತ್ತು ರೆಸ್ಟೋರೆಂಟ್, ಗ್ಯಾರೆಜ, ಹೊಟೇಲಗಳು, ಧಾಬಾಗಳು ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಮಕ್ಕಳನ್ನು ರಕ್ಷಣೆ ಮಾಡಿ ಸೂಕ್ತ ಶಿಕ್ಷಣ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.

Edited By : Abhishek Kamoji
Kshetra Samachara

Kshetra Samachara

15/10/2024 08:29 pm

Cinque Terre

19.72 K

Cinque Terre

0

ಸಂಬಂಧಿತ ಸುದ್ದಿ