ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಗೆ ಡಿಸಿಎಂ ಭೇಟಿ

ಬೆಂಗಳೂರು: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಾಲಿಕೆ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಎಲ್ಲಾ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಳೆ ವಿಚಾರ, ನಿಯಂತ್ರಣ ಕೊಠಡಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ, ಸ್ಚಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ.

ಈ ವೇಳೆ ಬಿಡಿಎ ಅಧ್ಯಕ್ಷ ಎನ್.ಎ ಹ್ಯಾರೀಸ್, ಆಡಳಿತಗಾರರಾದ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಡಿಎ ಆಯುಕ್ತ ಜಯರಾಮ್, ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಬಿ.ಎಂ.ಆರ್.ಡಿ.ಎ ಆಯುಕ್ತ ರಾಜೇಂದ್ರ ಚೋಳನ್, ಪ್ರಧಾನ ಅಭಿಯಂತರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

15/10/2024 10:32 pm

Cinque Terre

27.58 K

Cinque Terre

0

ಸಂಬಂಧಿತ ಸುದ್ದಿ