ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಳೆ ಅಬ್ಬರಕ್ಕೆ ಐಟಿ ಕಾರಿಡಾರ್‌ಗಳಲ್ಲಿ ನೀರೋನೀರು - ಇದಕ್ಕೆ ದುರಾಡಳಿತ, ಅಸಮರ್ಪಕ ನಿರ್ವಹಣೆ ಕಾರಣ ಎಂದ HDK

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಅಲ್ಲದೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದೆ. ಇನ್ನೂ ಐಟಿ ಕಾರಿಡಾರ್‌ಗಳಲ್ಲೂ ನೀರು ನುಗ್ಗಿ ಸಾಕಷ್ಟು ಸಮಸ್ಯೆ ಆಗಿದೆ. ಈ ಸಮಸ್ಯೆಗಳಿಗೆ ಕಾರಣ ಅಸಮರ್ಪಕ ನಿರ್ವಹಣೆ ಕಾರಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ ಐಟಿ ಕಾರಿಡಾರ್‌ನಲ್ಲಿ ಪ್ರವಾಹಸದೃಶ ಪರಿಸ್ಥಿತಿ ತಲೆದೋರಿದೆ. ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಕೆಟ್ಟ ನೀತಿಗಳು ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರವನ್ನು ಹಾಳುಗೆಡವಿದೆ. ಹೂಡಿಕೆದಾರ ಸ್ವರ್ಗವಾಗಿದ್ದ ಬೆಂಗಳೂರು, ಜಾಗತಿಕ ಮಟ್ಟದ ತಂತ್ರಜ್ಞಾನದ ನೆಚ್ಚಿನ ನೆಲೆವೀಡಾಗಿದ್ದ ಬೆಂಗಳೂರು ಈಗ ಇನ್ನಿಲ್ಲದ ದುಸ್ಥಿತಿಗೆ ಸಿಲುಕಿ ಕಣ್ಣೀರು ಹಾಕುತ್ತಿದೆ ಎಂದು ತಮ್ಮ ಸಾಮಾಜೀಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

15/10/2024 11:06 pm

Cinque Terre

732

Cinque Terre

0

ಸಂಬಂಧಿತ ಸುದ್ದಿ