ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ - ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮಸೀದಿಯಲ್ಲಿ 'ಜೈ ಶ್ರೀರಾಮ್' ಎಂದು ಘೋಷಣೆ ಕೂಗಿದ ಇಬ್ಬರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಯಾರಾದರೂ 'ಜೈ ಶ್ರೀ ರಾಮ್' ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದ್ದಾರೆ. ಈ ಪ್ರದೇಶದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ದೂರುದಾರರೇ ಹೇಳಿರುವುದನ್ನು ಹೈಕೋರ್ಟ್ ಗಮನಿಸಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ತೀರ್ಪು ಪ್ರಕಟಿಸಿದ್ದು, ಸೆಕ್ಷನ್ 295 ಎ ಬಗ್ಗೆ ವಿವರವಾಗಿ ತಿಳಿಸಿದೆ.​ ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ, ಆಕ್ರೋಶಗೊಳಿಸಲು ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ ಎಸಗುವುದಕ್ಕೆ ಸಂಬಂಧಿಸಿದ ಸೆಕ್ಷನ್ ಇದಾಗಿದೆ. ಆದರೆ 'ಜೈ ಶ್ರೀರಾಮ್' ಎಂದು ಕೂಗಿದ ಮಾತ್ರಕ್ಕೆ ಒಂದು ವರ್ಗದ ಧಾರ್ಮಿಕ ಭಾವನೆ ಕೆರಳಿಸಿದಂತಲ್ಲ ಎಂದು ಹೇಳಿದೆ. ಅದೂ ಅಲ್ಲದೆ, ಈ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸ್ನೇಹ ಸೌಹಾರ್ದದಿಂದ ಬದುಕುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬೇಕು ಎಂದು ಪೀಠ ಹೇಳಿದೆ.

ಏನಿದು ಪ್ರಕರಣ?:

ದಕ್ಷಿಣ ಕನ್ನಡದ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಎಂಬುವವರು ಸೆಪ್ಟೆಂಬರ್ 24ರ ರಾತ್ರಿ 10.50ರ ಸುಮಾರಿಗೆ ಮಸೀದಿಗೆ ನುಗ್ಗಿ 'ಜೈ ಶ್ರೀರಾಮ್' ಎಂದು ಘೋಷಣೆಗಳನ್ನು ಕೂಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಡಬ ಪೊಲೀಸರು ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಮೇಲೆ ಇಬ್ಬರನ್ನೂ ಬಂಧಿಸಿದ್ದರು. ಇಬ್ಬರ ವಿರುದ್ಧ ಸೆಕ್ಷನ್ 447, 505, 506, 34 ಮತ್ತು 295 ಎ ಸೇರಿದಂತೆ ವಿವಿಧ ಐಪಿಸಿ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Edited By : Vijay Kumar
PublicNext

PublicNext

16/10/2024 09:59 am

Cinque Terre

30.77 K

Cinque Terre

24

ಸಂಬಂಧಿತ ಸುದ್ದಿ