ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಾಯುಭಾರ ಕುಸಿತ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕಡಲ ಅಬ್ಬರ ಹೆಚ್ಚಾಗಿದ್ದು, ಮೀನುಗಾರರು ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆ ಆದೇಶಿಸಿದ್ದಾರೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಅಕ್ಟೋಬರ್ 16ರಿಂದ 19ರವರೆಗೆ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆ ನೀಡಿದೆ. ಆದ್ದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ತಕೆ ದಡ ಸೇರುವಂತೆ ತಿಳಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಹೊಗದಂತೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.

Edited By : Vijay Kumar
PublicNext

PublicNext

16/10/2024 10:23 am

Cinque Terre

17.62 K

Cinque Terre

0

ಸಂಬಂಧಿತ ಸುದ್ದಿ