ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣ: ಪೊಲೀಸ್ ಠಾಣೆಯ ಮುಂದೆ ಶ್ರೀರಾಮಸೇನಾ ಪ್ರತಿಭಟನೆ

ಹುಬ್ಬಳ್ಳಿ: ಅದು ಅಕ್ಷರಶಃ ಹುಬ್ಬಳ್ಳಿಯ ಶಾಂತಿಯನ್ನೇ ಭಗ್ನ ಮಾಡಿದ್ದ ಬಹುದೊಡ್ಡ ಗಲಭೆ ಪ್ರಕರಣ. ಈ ಪ್ರಕರಣದಲ್ಲಿ ರಾಜಕೀಯ ಪಕ್ಷಗಳ ಹೋರಾಟ ಹಾಗೂ ವಕೀಲರ ಕಾನೂನಾತ್ಮಕ ಹೋರಾಟ ಒಂದೆಡೆಯಾದರೇ ಶ್ರೀರಾಮಸೇನೆಯು ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಹಳೆಹುಬ್ಬಳ್ಳಿ ಗಲಭೆ ಕೇಸ್ ವಾಪಸ್ಸಿಗೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ ನಡೆಸಿದೆ.ಹೌದು..ಈಗಾಗಲೇ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ವಾಕ್ ಸಮರದ ಜೊತೆಗೆ ಬೆಂಗಳೂರಿನಲ್ಲಿಯೂ ಬಹುದೊಡ್ಡ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಅಲ್ಲದೇ ಹುಬ್ಬಳ್ಳಿಯ ವಕೀಲರ ಸಂಘವೂ ಕೂಡ ಕಾನೂನಾತ್ಮಕ ರೀತಿಯಲ್ಲಿ ಹೋರಾಟ ನಡೆಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನಾ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶ್ರೀರಾಮಸೇನಾ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಗಂಗಾಧರ ಕುಲಕರ್ಣಿ, ಶ್ರೀರಾಮಸೇನಾದಿಂದ ಬಹುದೊಡ್ಡ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಕೋಮು ಗಲಭೆಗಳನ್ನು ಮೆಟ್ಟಿನಿಂತು ಹುಬ್ಬಳ್ಳಿಯಲ್ಲಿ ಶಾಂತಿ ನೆಲೆಸಿತ್ತು. ಆದರೆ ಈ ಗಲಭೆ ಹುಬ್ಬಳ್ಳಿಯ ಶಾಂತಿ ಹಾಳು ಮಾಡಿದ್ದು, ಸರ್ಕಾರದ ನಡೆ ಈಗ ಎಲ್ಲೆಡೆಯೂ ಹೋರಾಟಕ್ಕೆ ಅಣಿ ಮಾಡಿಕೊಟ್ಟಂತಾಗಿದೆ.

-ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Shivu K
Kshetra Samachara

Kshetra Samachara

16/10/2024 01:33 pm

Cinque Terre

59.49 K

Cinque Terre

17

ಸಂಬಂಧಿತ ಸುದ್ದಿ