ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : 'ಕಾವೇರಿ ಐದನೇ ಹಂತದ ಯೋಜನೆ'ಗೆ ಸಿಎಂ ಸಿದ್ದು, ಡಿಕೆಶಿ ಲೋಕಾರ್ಪಣೆ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಸಿಎಂ ಕಾವೇರಿ ಮಾತೆಗೆ ಸಮರ್ಪಿಸಿದರು. ನಂತರ ಜೈಕಾ ಪ್ರತಿನಿಧಿಗಳು, ಸಚಿವರು, ಶಾಸಕರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಸಿಎಂ, ಡಿಸಿಎಂ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

Edited By : Manjunath H D
PublicNext

PublicNext

16/10/2024 03:17 pm

Cinque Terre

38.06 K

Cinque Terre

0

ಸಂಬಂಧಿತ ಸುದ್ದಿ