ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆನ್‌ಲೈನ್ ಬೆಟ್ಟಿಂಗ್ ಯುವ ಸಮುದಾಯಕ್ಕೆ ಮಾರಕ - ಹುಬ್ಬಳ್ಳಿಯಲ್ಲಿ ಹೊತ್ತಿದ ಹೋರಾಟದ ಕಿಡಿ

ಹುಬ್ಬಳ್ಳಿ: ಬಹುತೇಕ ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳು ಯುವ ಜನತೆಗೆ ಮಾರಕವಾಗಿದೆ. ಅದೆಷ್ಟೋ ಯುವ ಸಮುದಾಯದ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿಕೊಂಡು ಜೀವ ಹಾಗೂ ಜೀವನವನ್ನೇ ಕಳೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಕೂಡಲೇ ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಹುಬ್ಬಳ್ಳಿಯಲ್ಲಿ ಹೋರಾಟದ ಕಿಡಿಯೊಂದು ಹೊತ್ತಿಕೊಂಡಿದೆ.

ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳು ಜನಜೀವನಕ್ಕೆ ಪೂರಕವಾಗಿರದೇ ಮಾರಕವಾಗಿರುವುದು ನಿಜಕ್ಕೂ ಚಿಂತಾಜನಕ ಸಂಗತಿಯಾಗಿದೆ. ಆನ್‌ಲೈನ್ ಬೆಟ್ಟಿಂಗ್ ನಿಂದ ಯುವ ಸಮುದಾಯ ಕಾನೂನು ಬಾಹಿರ ಕೃತ್ಯಗಳತ್ತ ಹೆಜ್ಜೆ ಹಾಕುತ್ತಿರುವುದು ಖಂಡನೀಯವಾಗಿದೆ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆನ್‌ಲೈನ್ ಬೆಟ್ಟಿಂಗ್ ಗೇಮ್ ಹಾಗೂ ಆ್ಯಫ್ ಗಳನ್ನು ಬ್ಯಾನ್ ಮಾಡಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನಾ ವತಿಯಿಂದ ಉತ್ತರ ಕರ್ನಾಟಕ ಅಧ್ಯಕ್ಷ ಅಮೃತ ಇಜಾರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು. ಹೌದು.. ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ವಿರುದ್ಧ ಸಮರ ಸಾರಿದ ನಮ್ಮ‌ ಕರ್ನಾಟಕ ಸೇನೆ, ಕರ್ನಾಟಕದಲ್ಲಿ ಆನ್‌ಲೈನ್ ಬೆಟ್ಟಿಂಗ್ ಬಂದ ಮಾಡಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಮಾಡಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಇನ್ನೂ ಯುವ ಜನರಿಗೆ ಆನ್‌ಲೈನ್ ಬೆಟ್ಟಿಂಗ್‌ಗಳು ಮಾರಕವಾಗಿವೆ. 2700 ಯುವಕರು ಇದೇ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಿಂಗ್ ಆ್ಯಪ್‌ಗಳಿಂದ ಯುವಕರು, ಶಾಲಾ ವಿದ್ಯಾರ್ಥಿಗಳು ದಿನೇ ದಿನೇ ಬೆಟ್ಟಿಂಗ್ ಜಾಲಕ್ಕೆ ಸಿಲುಕಿ ತಮ್ಮ ಜೀವನವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಒಡಿಶಾ, ತೆಲಂಗಾಣ, ಅಸ್ಸಾಂ ರಾಜ್ಯಗಳು ಇಂತಹ ಆ್ಯಪ್‌ಗಳನ್ನ ಬ್ಯಾನ್ ಮಾಡಿವೆ. ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಇಂತಗ ಆ್ಯಪ್‌ಗಳನ್ನ ನಿಷೇಧಿಸಬೇಕೆಂದು ಒತ್ತಾಯಿಸಿದರು.

ಒಟ್ಟಿನಲ್ಲಿ‌ ಪ್ರತಿಭಟನೆಯ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರ ಹೋರಾಟಗಾರರು. ಕೂಡಲೇ ಆನ್ಲೈನ್ ಬೆಟ್ಟಿಂಗ್ ಆ್ಯಪ್ ರಾಜ್ಯದಲ್ಲಿಯೂ ಬಂದ್ ಮಾಡುವಂತೆ ಆಗ್ರಹಿಸಿದರು.

ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/10/2024 03:53 pm

Cinque Terre

235.81 K

Cinque Terre

25

ಸಂಬಂಧಿತ ಸುದ್ದಿ