ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ವಕ್ಫ್ ವಿರುದ್ಧ ಬೃಹತ್ ಪ್ರತಿಭಟನೆ: ಯತ್ನಾಳ ನೇತೃತ್ವದಲ್ಲಿ ಹಿಂದೂ ಶಕ್ತಿಯ ಅನಾವರಣ

ವಿಜಯಪುರ: ವಕ್ಫ್ ಕಾಯ್ದೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿದ ಹಿನ್ನಲೆ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ಹಿನ್ನಲೆಯಲ್ಲಿ ತೋಳಿಗೆ ಕಪ್ಪು ಬಟ್ಟೆ ಧರಿಸಿದ್ದಲ್ಲದೇ ಪ್ರತಿಭಟನೆ ವೇಳೆ ಧೋ ಎಂದು ಮಳೆ ಸುರಿದರೂ ಪ್ರತಿಭಟನಾಕಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಹಿಂದೂ ಮುಖಂಡರು ವಕ್ಫ್ ಹಾಗೂ ಕೆಲ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು‌. ಈ ಕುರಿತು ಇಲ್ಲಿದೆ ಡಿಟೇಲ್ಸ್...

ವಿಜಯಪುರ ಜಿಲ್ಲೆಯ 12,000 ಎಕರೆ, ವಿಜಯಪುರ ತಾಲೂಕಿನ 2,643 ಎಕರೆ ವಕ್ಫ್ ಆಸ್ತಿ ಎಂದು ನೋಂದಣಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರದಲ್ಲಿ ನೋಂದಣಿ ಮಾಡುವುದನ್ನು ಕೈಬಿಡುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪ್ರತಿಭಟನೆಗೆ​ ಕರೆ ಕೊಟ್ಟಿದ್ದರ ಹಿನ್ನಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಸಿದ್ದೇಶ್ವರ ದೇವಸ್ಥಾನ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಭಾರಿ ಮಳೆ ಸುರಿಯಿತು. ಮಳೆಯಲ್ಲಿಯೇ ಪ್ರತಿಭಟನಾಕಾರರು ಭಾಗವಹಿಸಿದ್ದರು. ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ನಾಯಕ ಸಿಟಿ ರವಿ, ಚಿಂತಕ ಚಕ್ರವರ್ತಿ ಸೂಲಿಬೆಲೆ, ಸಂಸದ ರಮೇಶ ಜಿಗಜಿಣಗಿ, ಮುಖಂಡರಾದ ಉಮೇಶ ಕಾರಜೋಳ, ರಾಘವ ಅಣ್ಣಿಗೇರಿ ಸೇರಿದಂತೆ ಹಿಂದೂ ಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು‌. ಈ ವೇಳೆ ಚಕ್ರವರ್ತಿ ಸೂಲೆಬೆಲಿ ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಲೀಪರ್ ಸೆಲ್ ಕಾರ್ಯ ನಿರ್ವಹಿಸುತ್ತಿವೆ ಎಂದು ಬಾಂಬ್ ಸಿಡಿಸಿದರು. ಇನ್ನೂ ಸಿ.ಟಿ.ರವಿ ಮಾತನಾಡಿ ವಕ್ಫ್ ಒಂದು ಕರಾಳ ಕಾಯ್ದೆ ಎಂದು ಮುಸ್ಲಿಂ ಮುಖಂಡರ ವಿರುದ್ಧ ಹರಿಹಾಯ್ದರು‌.

ಇನ್ನೂ ವಿಜಯಪುರ ನಗರ ಶಾಸಕ ವೇದಿಕೆಗೆ ಬಂದಾಗ ಘೋಷಣೆಗಳು ಮುಗಿಲು ಮುಟ್ಟಿದವು. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ನೇತೃತ್ವದ ಪ್ರತಿಭಟನೆಗೆ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಶಾಸಕ ಬಸನಗೌಡ ಯತ್ನಾಳ್​ ವಿರುದ್ಧ ಸಿ.ಡಿ ಅಸ್ತ್ರ ಪ್ರಯೋಗಿಸಿದ್ದರು. ಈ ವಿಷಯವನ್ನು ವೇದಿಕೆಯಲ್ಲಿ ಪ್ರಸ್ತಾಪಿಸಿದ ಯತ್ನಾಳ ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದರು. ಖಾದ್ರಿ ಅತ್ಯಾಚಾರ ಹಾಗೂ ಕೊಲೆ ಕೇಸ್‌ನಲ್ಲಿ ಆರೋಪಿ ಇದ್ದಾನೆ. ಆತನಿಗೆ ಐತಿ ಮಗನೇ, ಮಗನೇ ಸಚಿವ ಎಂ.ಬಿ.ಪಾಟೀಲ್‌ರಿಗೆ ಹೆದರಸಿದ ಹಂಗ ತಿಳ್ಕೊಂಡಿಯಾ? ನಾ ಅಂಜೋದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೇ ವಕ್ಪ್ ಆಸ್ತಿ ವಿರುದ್ಧ ಎಲ್ಲಾ ಹಿಂದೂಗಳು ಒಂದಾಗಬೇಕು. ಹಿಂದೂಗಳ ಶಕ್ತಿ ತೋರಬೇಕಿದೆ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಪ್ರತಿಭಟನಾ ಸಮಾವೇಶ ವೇದಿಕೆಗೆ ಆಗಮಿಸಿ ಮನವಿ ಸ್ವೀಕರಿಸಿದರು.

ಒಟ್ನಲ್ಲಿ ವಿಜಯಪುರ ಜಿಲ್ಲೆಯಲ್ಲಿ ವಕ್ಪ್ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಪ್ರತಿಭಟನೆ ಯಶಸ್ವಿಯಾಯಿತು. ವಿಜಯಪುರ ನಗರದಲ್ಲಿ ಹಿಂದೂ ಶಕ್ತಿಯ ಅನಾವರಣ.

Edited By : Nagesh Gaonkar
PublicNext

PublicNext

16/10/2024 03:54 pm

Cinque Terre

23.24 K

Cinque Terre

1