ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ಜಿಲ್ಲೆಯಲ್ಲಿ 9.9 ಮಿ.ಮೀ ಮಳೆ

ಚಿತ್ರದುರ್ಗ : ನಿರಂತರವಾಗಿ ಸುರಿಯುತ್ತಿರುವ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 9.9 ಮಿ.ಮೀ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.2 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 5.2 ಹಿರಿಯೂರು ತಾಲ್ಲೂಕು 10 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 9.3 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 20 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 6.7 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4.6 ಮಿ.ಮೀ, ನಾಯಕನಹಟ್ಟಿ 9.4 ಮಿ.ಮೀ, ಪರಶುರಾಂಪುರ 6 ಮಿ.ಮೀ, ತಳಕು 9 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 5.6 ಮಿ.ಮೀ, ಭರಮಸಾಗರ 5.5 ಮಿ.ಮೀ, ಹಿರೇಗುಂಟನೂರು 5.6 ಮಿ.ಮೀ, ತುರುವನೂರು 3.9 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 13 ಮಿ.ಮೀ, ಐಮಂಗಲ 8.9 ಮಿ.ಮೀ, ಧರ್ಮಪುರ 9 ಮಿ.ಮೀ, ಜವನಗೊಂಡನಹಳ್ಳಿ 10.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 12.4 ಮಿ.ಮೀ, ಬಿ.ದುರ್ಗ 7.4 ಮಿ.ಮೀ, ರಾಮಗಿರಿ 6.9 ಮಿ.ಮೀ, ತಾಳ್ಯ 10.5 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 7.6 ಮಿ.ಮೀ, ಮಾಡದಕೆರೆ 11.3 ಮಿ.ಮೀ, ಮತ್ತೋಡು 41.1 ಮಿ.ಮೀ, ಶ್ರೀರಾಂಪುರ 31.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 6.7 ಮಿ.ಮೀ ಹಾಗೂ ದೇವಸಮುದ್ರದಲ್ಲಿ 6.8 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Edited By : Nirmala Aralikatti
Kshetra Samachara

Kshetra Samachara

16/10/2024 05:13 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ