ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚನ್ನಪಟ್ಟಣ: ಹೊತ್ತಿ ಉರಿದ ಘನತ್ಯಾಜ್ಯ ನಿರ್ವಹಣೆ ಘಟಕ

ಚನ್ನಪಟ್ಟಣ : ಗ್ರಾಮ ಪಂಚಾಯಿತಿಗಳ ಘನತ್ಯಾಜ್ಯದ ಸಮರ್ಪಕ ನಿರ್ವಹಣೆಗಾಗಿ, ತಾಲ್ಲೂಕಿನ ವಂದಾರಗುಪ್ಪೆಯಲ್ಲಿ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಿರುವ ಮೆಟೀರಿಯಲ್ ರಿಕವರಿ ಫೆಸಿಲಿಟಿ (ಎಂ ಆರ್ ಎಫ್) ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಟನ್ ಗಟ್ಟಲೆ ವಿಂಗಡಿತ ಪ್ಲಾಸ್ಟಿಕ್ ಹಾಗೂ ಒಣ ತ್ಯಾಜ್ಯವಿದ್ದ ಘಟಕದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿ, ಇಡೀ ಘಟಕವನ್ನು ವ್ಯಾಪಿಸಿದೆ. ಆಗ ಘಟಕದಲ್ಲಿ ಕಾರ್ಮಿಕರು ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಬಂದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿತು ಎಂಬುದು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

Edited By : Manjunath H D
PublicNext

PublicNext

16/10/2024 05:30 pm

Cinque Terre

26.69 K

Cinque Terre

0

ಸಂಬಂಧಿತ ಸುದ್ದಿ