ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ವಿಜಯಪುರ ಜಿಲ್ಲೆ ಮಮದಾಪುರ ಅರಣ್ಯಕ್ಕೆ ಮರು ನಾಮಕರಣ - ಈಶ್ವರ ಖಂಡ್ರೆ

ಬೆಂಗಳೂರು : ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದ 1494 ಎಕರೆ 38 ಗುಂಟೆ ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯ ಸ್ಮರಣೆಯ ದಿನವಾದ ಜನವರಿ 2ರಂದು ವಿಜಯಪುರದಲ್ಲಿ ವಿಧ್ಯುಕ್ತವಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಫಲಕವನ್ನು ಅನಾವರಣ ಮಾಡಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಸುಮಾರು 1494 ಎಕರೆ 38 ಗುಂಟೆ ವಿಸ್ತೀರ್ಣದ ಅರಣ್ಯವಿದೆ. ಪ್ರಾಣಿಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ ಮತ್ತು ಸಸ್ಯ ಸಂಕುಲದಿಂದ ಕೂಡಿರುವ ಶ್ರೀಮಂತ ಜೀವವೈವಿಧ್ಯತೆಯ ಈ ತಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವೀಧ್ಯ ಪಾರಂಪರಿಕ ತಾಣ ಎಂದು ಜೀವವೈವಿಧ್ಯ ಕಾಯಿದೆ.

2022ರ ಸೆಕ್ಷನ್ 37ರನ್ವಯ ಮರು ನಾಮಕರಣ ಮಾಡಲಾಗುತ್ತಿದೆ. ಮಮದಾಪುರದ ಅಧಿಸೂಚಿತ ಅರಣ್ಯ ಎಲೆ ಉದುರುವ ಕಾಡು ಮತ್ತು ಕುರುಚಲು ಕಾಡುಗಳಿಂದ ಕೂಡಿದ ಪ್ರದೇಶವಾಗಿದ್ದು, ಚಿರತೆಗಳು, ನರಿಗಳು, ಕತ್ತೆ ಕಿರುಬಗಳು ಮತ್ತು ಹಲವಾರು ಪ್ರಭೇದದ ಪಕ್ಷಿಗಳತಾಣವಾಗಿದೆ. ಸಸ್ಯ ಸಂಕುಲ, ಕೀಟ ಸಂಕುಲದ ನೆಲೆಬೀಡೂ ಆಗಿದೆ.

ಬಿಜಾಪುರ, ಬಾಗಲಕೋಟೆ ಭಾಗದಲ್ಲಿ ಅರಣ್ಯ ಪ್ರದೇಶವೇ ಕಡಿಮೆ ಇದ್ದು, ಇರುವ ವನ ಪ್ರದೇಶವನ್ನು ಮತ್ತು ಇಲ್ಲಿನ ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು ಇಂದಿನ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಶ್ರೀ ಸಿದ್ಧೇಶ್ವರ ಶ್ರೀಗಳ ಹೆಸರನ್ನು ಈ ಕಾನನ ಪ್ರದೇಶಕ್ಕೆ ಇಡುವುದರಿಂದ ಜನರಲ್ಲಿ ಪರಿಸರ ಜಾಗೃತಿ ಮೂಡಿಸಲೂ ನೆರವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Edited By : Abhishek Kamoji
PublicNext

PublicNext

16/10/2024 06:18 pm

Cinque Terre

12.05 K

Cinque Terre

0

ಸಂಬಂಧಿತ ಸುದ್ದಿ