ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಒಳ ಮೀಸಲಾತಿ ಜಾರಿಗೊಳಿಸುವಂತೆ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ

ಬೆಳಗಾವಿ: ಸರ್ವೋಚ್ಚ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣ ಪೀಠವು ಎಸ್ಸಿ-ಎಸ್ಟಿ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವುದು ರಾಜ್ಯ ಸರಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಸುಪ್ರೀಂ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಆಗ್ರಹಿಸಿದೆ.

ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಯಿತು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮೀಸಲಾತಿಯನ್ನು ಪರಿಣಾಮಕಾರಿಗೊಳಿಸುವ ಹಲವು ಸಾಧ್ಯತೆಗಳಲ್ಲಿ ಒಳ ಮೀಸಲಾತಿಯು ಒಂದು. ಒಳ ಮೀಸಲಾತಿಗಾಗಿ ಕರ್ನಾಟಕದಲ್ಲಿ ಮೂರು ದಶಕಗಳ ನಿರಂತರ ಹೋರಾಟ ನಡೆದಿದೆ. ಒಳ ಮೀಸಲಾತಿ ಹೋರಾಟದ ಬಗ್ಗೆ ಪ್ರಸ್ತುತ ಸರಕಾರವು ಕೇವಲ ಸಹಾನುಭೂತಿ ತೋರಿಸುತ್ತದೆ ನಿಜ. ಸಹಾನುಭೂತಿ ಕ್ರಿಯಾತ್ಮಕ ರೂಪ ಪಡೆಯದಿದ್ದರೆ ಅಪ್ರಯೋಜಕ.

ಪರಿಶಿಷ್ಟ ಜಾತಿಗಳಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅತಿ ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಯ ಕಲ್ಯಾಣದ ಸದುದ್ದೇಶದಿಂದ ಆಯಾ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಸೌಲಭ್ಯ ತಲುಪಲು ಒಳ ಮಿಸಲಾತಿ ನೀಡುವ ಸಾಂವಿಧಾನಿಕ ಅಧಿಕಾರವು ಆಯಾ ರಾಜ್ಯಗಳಿಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ಪೂರ್ಣ ಪೀಠವು ತೀರ್ಪು ನೀಡಿದೆ. ಸಂವಿಧಾನ ಪರಿಚ್ಛೇದ 341ನೇ ವಿಧಿಯ ತಿದ್ದುಪಡಿಯ ಅವಶ್ಯಕತೆ ಇರುವುದಿಲ್ಲ ಎಂದು ಪೀಠವು ಅಭಿಪ್ರಾಯ ಪಟ್ಟಿದೆ ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಸದಸ್ಯರು ತಿಳಿಸಿದರು.‌

Edited By : Shivu K
PublicNext

PublicNext

16/10/2024 06:28 pm

Cinque Terre

8.14 K

Cinque Terre

0

ಸಂಬಂಧಿತ ಸುದ್ದಿ