ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಶಿಗ್ಗಾಂವಿ ಉಪಚುನಾವಣೆಗೆ ಜಿಲ್ಲಾಡಳಿತ ಸಿದ್ಧ - ಜಿಲ್ಲಾಧಿಕಾರಿ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವ್ ಉಪಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಹಾವೇರಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ್ ದಾನಮ್ಮನವರ್ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಜಿಲ್ಲಾಡಳಿತ ನ್ಯಾಯಸಮ್ಮತ ಪಾರದರ್ಶಕ ಚುನಾವಣೆಗೆ ಸಕಲ ಸಿದ್ಧತೆ ಕೈಗೊಂಡಿದೆ ಎಂದು ತಿಳಿಸಿದರು.

ಶಿಗ್ಗಾಂವ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಯಾಗಿ ಸವಣೂರ ಉಪ ವಿಭಾಗಾಧಿಕಾರಿ ಮಹ್ಮದ್ ಖೈಝರ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿಯಾಗಿ ಶಿಗ್ಗಾಂವ ತಹಶೀಲ್ದಾರ್ ಸಂತೋಷ ಹಿರೇಮಠ ಕಾರ್ಯ ನಿರ್ವಹಿಸಲಿದ್ದಾರೆ. ಶಿಗ್ಗಾಂವ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸ್ವೀಕಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನವಂಬರ್ 13 ರಂದು ಮತದಾನ ನಡೆಯಲಿದೆ. ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ನವಂಬರ್ 25 ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಶಿಗ್ಗಾಂವ ವಿಧಾನಸಭಾ ಕ್ಷೇತ್ರದಲ್ಲಿ 2024ಕ್ಕೆ ಅನ್ವಯವಾಗುವಂತೆ 1,21,067 ಪುರುಷರು, 1,15,717 ಮಹಿಳೆಯರು, 6 ಜನ ಇತರೆ ಸೇರಿದಂತೆ 2,36,790 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Edited By : Nagesh Gaonkar
PublicNext

PublicNext

16/10/2024 06:45 pm

Cinque Terre

25.04 K

Cinque Terre

0

ಸಂಬಂಧಿತ ಸುದ್ದಿ