ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಆನ್‌ಲೈನ್ ಬೆಟ್ಟಿಂಗ್ , ಆನ್‌ಲೈನ್ ಬೆಟ್ಟಿಂಗ್ ಗೇಮ್ಸ್‌ ನಿಷೇಧಿಸಿ - ಡಿಸಿಗೆ ಮನವಿ

ಬೆಳಗಾವಿ: ಆನ್‌ಲೈನ್ ಬೆಟ್ಟಿಂಗ್ ಮತ್ತು ಆನ್‌ಲೈನ್ ಬೆಟ್ಟಿಂಗ್ ಗೇಮ್ಸ್‌ ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಯುವುದು ಹಾಗೂ ಬೆಟ್ಟಿಂಗ್" ಗೇಮ್ ವೆಬ್ ಸೈಟ್ ನಿಷೇಧಿಸುವಂತೆ ಮನವಿ ಸಲ್ಲಿಸಲಾಯಿತು.‌

ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ನಮ್ಮ ಕರ್ನಾಟಕ ಸೇನೆ ಜಿಲ್ಲಾ ಅಧ್ಯಕ್ಷ ಇರ್ಫಾನ ಅತ್ತಾರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸ್ವತಹ ಜಿಲ್ಲಾಧಿಕಾರಿ ಮಹಮ್ಮದ ರೋಷನ್ ಅವರು ಮನವಿ ಸ್ವೀಕರಿಸಿದರು.‌

ಸುಮಾರು ದಿನಗಳಿಂದ ಆನ್‌ಲೈನ್ ಬಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್‌ನಿಂದ ಆಗುತ್ತಿರುವ ಅನಾಹುತಗಳಿಂದ ಹಲವಾರು ವಿದ್ಯಾರ್ಥಿಗಳು, ಯುವಕರು, ಇದನ್ನು ಚಟವಾಗಿಸಿಕೊಂಡಿದ್ದಾರೆ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದೆ. ಹಾಗೂ ಹಲವಾರು ಯುವಕರು, ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದರ ಬಗ್ಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಅರಿವುಮೂಡಿಸಲು ಹಾಗೂ ಈ ರೀತಿ ಮೋಸಮಾಡುವ ಉದ್ದೇಶದಿಂದಲೇ, ಜರನ್ನು ವಂಚಿಸುತ್ತಿರುವ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ ಹಾಗೂ ಅಪ್ಲಿಕೇಶನ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Edited By : Nagesh Gaonkar
PublicNext

PublicNext

16/10/2024 06:51 pm

Cinque Terre

9.64 K

Cinque Terre

0

ಸಂಬಂಧಿತ ಸುದ್ದಿ