ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವದಾರಿ ಗಣಿಗಾರಿಕೆಗಾಗಿ 500 ಕೋಟಿ ರೂ. ಪಾವತಿಸಿಲ್ಲ - ಈಶ್ವರ್ ಖಂಡ್ರೆ

ಬೆಂಗಳೂರು : ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿರುವಂತೆ ದೇವದಾರಿ ಗಣಿಗಾರಿಕೆಗಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ 500 ಕೋಟಿ ರೂ. ಪಾವತಿಸಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸಿದ ಕೆ.ಐ.ಓ.ಸಿ.ಎಲ್. ಪರಿಸರಕ್ಕೆ ಮಾಡಿರುವ ಹಾನಿಯ ಮೊತ್ತ ಸೇರಿದಂತೆ ಇಲಾಖೆಗೆ ಸುಮಾರು 1400 ಕೋಟಿ ರೂಪಾಯಿ ಬಾಕಿ ಪಾವತಿಸಬೇಕು ಎಂದು ಹೇಳಿದರು.

ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿದ್ದಕ್ಕಾಗಿ 119.12 ಕೋಟಿ, ಗಣಿಗಾರಿಕೆಗಾಗಿ ಹೊಸ ಭೂಮಿ ಅಗೆದಿದ್ದಕ್ಕಾಗಿ 19.88 ಕೋಟಿ ರೂ. ಸೇರಿದಂತೆ 142.96 ಕೋಟಿ ರೂ.ಗಳನ್ನು ಪರೋಕ್ಷ ಮತ್ತು ಪ್ರತ್ಯಕ್ಷ ಪರಿಸರ ಹಾನಿಗಾಗಿ ಕಂಪನಿ ಪಾವತಿಸಬೇಕು.

ಇದಲ್ಲದೆ ಮಹಾ ಲೆಕ್ಕಪರಿಶೋಧಕರು ಉಲ್ಲೇಖಿಸಿರುವಂತೆ ನಿವ್ವಳ ಪ್ರಸ್ತುವ ಮೌಲ್ಯ (ಎನ್.ಪಿ.ವಿ.) ಮೊತ್ತ, ಬಡ್ಡಿ ಸೇರಿ 1349.52948 ಕೋಟಿ ರೂ. ಪಾವತಿಸಬೇಕು ಎಂದೂ ಈಶ್ವರ ಖಂಡ್ರೆ ವಿವರಿಸಿದರು.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಎನ್.ಎಂ.ಡಿ.ಸಿ.ಯಿಂದ ಅದಿರು ಖರೀದಿಸಬಹುದು ಮತ್ತು ಖಾಸಗಿಯವರಿಂದಲೂ ಖರೀದಿಸಬಹುದು.

ಪರಿಸರ ಉಳಿಸುವ ಜವಾಬ್ದಾರಿ ಇಲಾಖೆಯ ಮೇಲಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಎಚ್.ಡಿ. ಕುಮಾರಸ್ವಾಮಿ ಅವರು ಸುಖಾ ಸುಮ್ಮನೆ ರಾಜಕೀಯ ಕಾರಣ ಎಂದು ಆರೋಪಿಸುತ್ತಿದ್ದಾರೆ ಎಂದರು.

Edited By : Nirmala Aralikatti
PublicNext

PublicNext

16/10/2024 07:34 pm

Cinque Terre

15.53 K

Cinque Terre

0

ಸಂಬಂಧಿತ ಸುದ್ದಿ