ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೆಂಬರ್ 1 ರಂದು ಅದ್ದೂರಿಯಾಗಿ ನಾಡ ಹಬ್ಬ ರಾಜ್ಯೋತ್ಸವನ್ನು ಆಚರಣೆ - ಅಪರ ಜಿಲ್ಲಾಧಿಕಾರಿ ಮಂಗಳ

ಕೋಲಾರ : ಪ್ರತಿ ವರ್ಷದಂತೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಮಂಗಳ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ‌ ಅವರು, ರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರೀಯ ಧ್ವಜಾರೋಹಣ ನೇರವೆರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.

Edited By : Nirmala Aralikatti
Kshetra Samachara

Kshetra Samachara

16/10/2024 07:36 pm

Cinque Terre

460

Cinque Terre

0

ಸಂಬಂಧಿತ ಸುದ್ದಿ