ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ಮಳೆ ಲೆಕ್ಕಿಸದೇ ವೀರಜ್ಯೋತಿಯ ಅದ್ಧೂರಿ ಸ್ವಾಗತ

ಬೆಳಗಾವಿ : ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಿ ಬೆಳಗಾವಿ ನಗರಕ್ಕೆ ಬುಧವಾರ ಸಂಜೆ ಆಗಮಿಸಿದ ವೀರಜ್ಯೋತಿಯನ್ನು ಸುರಿಯುವ ಮಳೆಯನ್ನೂ ಲೆಕ್ಕಿಸದೇ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಅ.1 ರಂದು ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ ವಿಜಯ ಜ್ಯೋತಿಯು ರಾಜ್ಯದ ವಿವಿಧೆಡೆ ಸಂಚರಿಸಿ ಖಾನಾಪುರ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿತು. ಬುಧುವಾರ ಸಾಯಂಕಾಲ ಭಾರಿ‌ ಮಳೆಯ ನಡುವೆಯೂ ಸಂಭ್ರಮ, ಸಡಗರದಿಂದ ಜ್ಯೋತಿಯನ್ನು ಜಿಲ್ಲಾಡಳಿತದಿಂದ ಬರಮಾಡಿಕೊಳ್ಳಲಾಯಿತು.

ಈ ವೇಳೆ ಉಪಮೇಯರ್ ಆನಂದ ಚೌಗುಲೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪವಿಭಾಗಾಧಿಕಾರಿ ಶ್ರವಣ ನಾಯಕ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ‌ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿ ಮತ್ತಿತರ ಗಣ್ಯರು ಜ್ಯೋತಿಗೆ ಪೂಜೆ ಸಲ್ಲಿಸಿ, ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಇಲ್ಲಿಂದ ಚನ್ನಮ್ಮನ ಜನ್ಮಭೂಮಿ ಕಾಕತಿಗೆ ಜ್ಯೋತಿಯನ್ನು ಬೀಳ್ಕೊಡಲಾಯಿತು.

Edited By : Nagesh Gaonkar
PublicNext

PublicNext

16/10/2024 09:09 pm

Cinque Terre

7.35 K

Cinque Terre

0

ಸಂಬಂಧಿತ ಸುದ್ದಿ